ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣಾ ನಡೆಯಲಿದ್ದು ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ.
ರಾಜ್ಯಾದ್ಯಂತ ಅಬ್ಬರದ ಪ್ರಚಾರ, ವಾಕ್ಸಮರ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಇದರ ಮಧ್ಯೆಯು ಹಾಲಿ ಸಂಸದ ಪ್ರತಾಪ್ ಸಿಂಹ ಏಕಾಂಗಿಯಾಗಿ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಮೊಟ್ಟಮೊದಲ ಬಾರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗರ್ಭಗುಡಿ ಮುಂಭಾಗ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂತರ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ.
ಚುನಾವಣಾದ ಅಬ್ಬರದ ನಡುವೆ ಏಕಾಂಗಿಯಾಗಿ ದೇವರ ದರ್ಶನಕ್ಕೆ ಭೇಟಿ ನೀಡಿರುವುದು ಹಲವು ಚರ್ಚೆಗೆ ಗ್ರಾಸವಾಗಿದೆ.




