ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಮಹಾ ರಥೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.
ವಾರಗಳ ಹಿಂದೆಯೇ ರಾಜ್ಯದ ವಿವಿಧೆಡೆಯಿಂದ ಕಾಲ್ನಡಿಗೆ ಮೂಲಕ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ ಬೀಡು ಬಿಟ್ಟಿದ್ದಾರೆ. ಸಾಲು ಸಾಲು ಸರಕಾರಿ ರಜೆ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಇನ್ನಿತರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಹುಲಿ ವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನ ಉತ್ಸವದಲ್ಲಿ ಭಕ್ತರು ಪಾಲ್ಗೊಂಡಿದ್ದರು. ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಭಕ್ತಿಭಾವ ಮೆರೆದರು.