ಚಾಮರಾಜನಗರ

ಖಾಸಗಿ ಬಸ್‌ – ಕಾರು ಡಿಕ್ಕಿ : ಐವರಿಗೆ ಗಾಯ

ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ.

ಕಾರಿನಲ್ಲಿದ್ದ ರಾಜಸ್ಥಾನ ಮೂಲದವರಾದ ಅನಿಲ್ (28), ತನಿಷಾ (17), ಜಯಷ (21),ಅಂಕಿತ್(8), ರಿಂಕಿ (25) ಗಾಯಗೊಂಡವರು. ಗಾಯಾಳುಗಳನ್ನು ಚಾ.ನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜಸ್ಥಾನ ಮೂಲದ ಕಾರು ಬೆಂಗಳೂರಿನಿಂದ ಊಟಿಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎರಡೂ ವಾಹನಗಳನ್ನು ಜಪ್ತಿ ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

6 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

8 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

8 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

8 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

8 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

11 hours ago