ಚಾಮರಾಜನಗರ

ಲಾಭದತ್ತ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಮುತ್ತುರಾಮ್

ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು.

ತಾಲೂಕಿನ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ಸಹಕಾರ ಸಂಘದ ವತಿಯಿಂದ ರಾಮಾಪುರ ಹೋಬಳಿ ವ್ಯಾಪ್ತಿಯ 362 ಷೇರುದಾರರಿಗೆ 3 ಕೋಟಿ 73 ಲಕ್ಷ ಸಾಲ ನೀಡಲಾಗಿದ್ದು ಎಲ್ಲರೂ ಮರುಪಾವತಿ ಮಾಡಿರುವುದರಿಂದ ಪ್ರಸಕ್ತ ವರ್ಷ 2,34,915ಗಳು ಲಾಭ ಬಂದಿದೆ. ನಾವು ಅಧಿಕಾರಕ್ಕೆ ಬರುವ ಮುನ್ನ 7 ಲಕ್ಷ ಸಾಲದ ಸುಳಿಯಲ್ಲಿ ಇದ್ದು. ಅಧಿಕಾರ ವಹಿಸಿಕೊಂಡ ನಾಲ್ಕು ವರ್ಷಗಳಲ್ಲಿ ಎಲ್ಲಾ ಸರ್ವ ಸದಸ್ಯರ ಸಹಕಾರದಿಂದ ಸಂಘವನ್ನು ಲಾಭದತ್ತ ಕೊಂಡೊಯ್ದಿದ್ದೇನೆ. ಷೇರುದಾರ ಕುಟುಂಬಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲದೆ ಉಚಿತ ಯಶಸ್ವಿನಿ ಯೋಜನೆ ಮಾಡಿಸಿಕೊಟ್ಟಿದ್ದೇವೆ. ಇದಲ್ಲದೆ ಸಂಘದ ವತಿಯಿಂದ ತೆರೆಯಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ 2 ಲಕ್ಷ ರೂಪಾಯಿ ಆದಾಯ ಬಂದಿದೆ, ಸಂಘವು 18 ಲಕ್ಷ ಲಾಭ ಪಡೆದಿರುವುರಿಂದ ಹದಿನೈದು ಲಕ್ಷ ಲಾಭದ ಹಣವನ್ನು ಎಫ್ ಡಿ ಮಾಡಲಾಗಿದೆ ಎಂದು ತಿಳಿಸಿದರು.

ರಾಮಪುರ ಹೋಬಳಿ ವ್ಯಾಪ್ತಿಯ ರೈತರವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸಗೊಬ್ಬರ ಮಾರಾಟ ಹಾಗೂ ನ್ಯಾಯಬೆಲೆ ಅಂಗಡಿ ತೆರೆಯಲು ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಅನುಮತಿ ಸಿಕ್ಕರೆ ಇನ್ನಷ್ಟು ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಲವೊಮ್ಮೆ ಮಳೆಗಾಲದ ಸಂದರ್ಭದಲ್ಲಿ ನಮ್ಮ ಭಾಗದ ರೈತರು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆ ಕೊಟ್ಟು ರಸಗೊಬ್ಬರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ಇದೆ .ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರಸಗೊಬ್ಬರ ಮಾರಾಟ ಮಾಡಲು ಆದಷ್ಟು ಬೇಗ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಮೋಟೆಯ್ಯ ಗೌಂಡರ್, ನಿರ್ದೇಶಕರುಗಳಾದ ಎಂ ಕೃಷ್ಣ ನಾಯಕ್, ಮಹಾದೇವ ಎಂ, ಕೃಷ್ಣಮೂರ್ತಿ ಕೆ, ಸಿಂಗಾರ ವೇಲನ್, ಕೃಷ್ಣಮೂರ್ತಿ ಸಿ, ಜ್ಯೋತಿ, ಸುರೇಶ್, ಜಿಲ್ಲಾ ಸಹಕಾರ ಕೇಂದ್ರದ ಬ್ಯಾಂಕ್ ಪ್ರತಿನಿಧಿ ಬಾಲಾಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ್ ಸಹಾಯಕಿ ಶ್ವೇತ, ಮುಖಂಡರಾದ ಅಶ್ವಥ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago