ಚಾಮರಾಜನಗರ

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿದ್ಯುತ್ ಖಾಸಗಿಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಇಂಧನ ಇಲಾಖೆ ಸಾರ್ವಜನಿಕರ ಆಸ್ತಿ ಇದನ್ನು ಖಾಸಗಿಕರಣ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಅನುಕೂಲವಾಗಲಿ ಎಂಬುವ ನಿಟ್ಟಿನಲ್ಲಿ 200 ಯೂನಿಟ್ ಗಳ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿ ಮರಣ ಶಾಸನವನ್ನು ರಚಿಸಲು ಹೊರಟಿದೆ. ಇದನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ಇದು ಮಂಡನೆ ಆದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತ ದೇಶದ ಬೆನ್ನೆಲುಬು. ರೈತರಿಗೆ ಸರ್ಕಾರ ಹಲವು ಯೋಜನೆಯಡಿ ವಿದ್ಯುತ್ ನೀಡಲಾಗುತ್ತಿದೆ. ರೈತ ಕಷ್ಟಪಟ್ಟು ದೇಶಕ್ಕೆ ಹಣ ನೀಡುತ್ತಾನೆ. ಅಂತಹವರಿಗೆ ತೊಂದರೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರೈತನಿಂದ ಪ್ರಾರಂಭವಾಗಿ ಕೈಗಾರಿಕೆಯವರೆಗೂ ಖಾಸಗೀಕರಣ ಮಾಡಿದರೆ ಯಾರೊಬ್ಬರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಅನ್ನದಾತರಾದ ರೈತರಿಗೆ ಅನ್ಯಾಯ ಮಾಡಿ 2026ರ ಅಧಿವೇಶದಲ್ಲಿ ವಿದ್ಯುತ್ ಕಾಯಿದೆ ಬಿಲ್ಲನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿಧವನ್ನು ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಇಲಾಖೆಯು ಹಲವಾರು ನೌಕರರ ಬಲಿದಾನದಿಂದ ಕಷ್ಟಪಟ್ಟು ಕಟ್ಟಿರುವ ಬೃಹತ್ ಸಂಸ್ಥೆ ಈ ಸಂಸ್ಥೆಯನ್ನು ಖಾಸಗಿಕರಣ ಮಾಡಲು ವಿದ್ಯುತ್ ಕಾಯ್ದೆ ಬಿಲ್ ಪಾಸ್ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಮೊಹಮ್ಮದ್ ರಿಯಾಜ್, ಮಣಿಕಂಠ, ಮನೋಜ್ ಕುಮಾರ್, ನಾಗೇಂದ್ರ, ಕವಿರಾಜು, ರಘುನಂದನ್ ಸದಸ್ಯರಾದ ಅರ್ಜುನ್, ವೆಂಕಟೇಶ್ ಮೂರ್ತಿ, ನವೀನ್,ಮಂಜೇಶ್, ಶಾದಬ್, ಕಿರಿಯ ಅಭಿಯಂತರಗಳಾದ ಮಹೇಶ್, ವೆಂಕಟೇಶ್ ಸೇರಿದಂತೆ ಹನೂರು ವಿಭಾಗದ ಎಲ್ಲಾ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

11 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

12 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

13 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

14 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

14 hours ago