Mysore
16
clear sky

Social Media

ಬುಧವಾರ, 10 ಡಿಸೆಂಬರ್ 2025
Light
Dark

ಚಾ.ನಗರ | ಒಳ ಮೀಸಲು ವರದಿ ತಿರಸ್ಕರಿಸಲು ಆಗ್ರಹಿಸಿ ಪ್ರತಿಭಟನೆ

chamaraja nagara

ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ ವಿರುದ್ದ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ಕರೆದು ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಸಲ್ಲಿಸಿರುವ ಸಮೀಕ್ಷಾ ವರದಿಯನ್ನು ಪುನರ್ ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ( ಪಾಪು) ಮಾತನಾಡಿ, ಪರಿಶಿಷ್ಟ ಜಾತಿಯ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಬಲಗೈ ಸಮುದಾಯಕ್ಕೆ ತುಂಬಾ ಅನ್ಯಾಯವಾಗುತ್ತದೆ. ಆದ್ದರಿಂದ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವ ಈ ವರದಿ ಜಾರಿ ಮಾಡದೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಅಯ್ಯನಪುರ ಶಿವಕುಮಾರ್, ಮುಖಂಡರಾದ ಸಿ.ಎಂ.ಶಿವಣ್ಣ, ಆಲೂರು ನಾಗೇಂದ್ರ, ನಾಗಯ್ಯ, ವಕೀಲ ದಲಿತರಾಜ್, ಆಟೋ ಉಮೇಶ್, ನಾಗೇಶ್, ಶಿವಣ್ಣ, ಮೊದಲಾದವರು ಭಾಗವಹಿಸಿದ್ದರು.

Tags:
error: Content is protected !!