chamaraja nagara
ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ ವಿರುದ್ದ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ಕರೆದು ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಸಲ್ಲಿಸಿರುವ ಸಮೀಕ್ಷಾ ವರದಿಯನ್ನು ಪುನರ್ ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ( ಪಾಪು) ಮಾತನಾಡಿ, ಪರಿಶಿಷ್ಟ ಜಾತಿಯ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಬಲಗೈ ಸಮುದಾಯಕ್ಕೆ ತುಂಬಾ ಅನ್ಯಾಯವಾಗುತ್ತದೆ. ಆದ್ದರಿಂದ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವ ಈ ವರದಿ ಜಾರಿ ಮಾಡದೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಅಯ್ಯನಪುರ ಶಿವಕುಮಾರ್, ಮುಖಂಡರಾದ ಸಿ.ಎಂ.ಶಿವಣ್ಣ, ಆಲೂರು ನಾಗೇಂದ್ರ, ನಾಗಯ್ಯ, ವಕೀಲ ದಲಿತರಾಜ್, ಆಟೋ ಉಮೇಶ್, ನಾಗೇಶ್, ಶಿವಣ್ಣ, ಮೊದಲಾದವರು ಭಾಗವಹಿಸಿದ್ದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…