ಚಾಮರಾಜನಗರ

ಅಜ್ಜೀಪುರ – ಗರಿಕೆಕಂಡಿ ರಸ್ತೆ ಅಭಿವೃದ್ಧಿಪಡಿಸುವಂತೆ ಪ್ರತಿಭಟನೆ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಾಪುರ ಹೋಬಳಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ದುರಸ್ತಿಗೊಂಡಿರುವುದರಿಂದ ದ್ವಿಚಕ್ರ ವಾಹನವು ಸಂಚರಿಸದಷ್ಟು ದೊಡ್ಡ ದೊಡ್ಡ ಗುಂಡಿಗಳಾಗಿದೆ. ಈ ರಸ್ತೆಯಲ್ಲಿ ಹಲವಾರು ಬಾರಿ ಲಾರಿ ಆಟೋ ದ್ವಿಚಕ್ರ ವಾಹನಗಳು ಅಪಘಾತಗೊಂಡು ಪ್ರಾಣವನ್ನೇ ಕಳೆದುಕೊಂಡಿದ್ದರೆ, ಕೆಲವರು ಕೈಕಾಲು ಮುರಿದುಕೊಂಡಿದ್ದಾರೆ. ಈ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಆರೋಪಿಸಿ ವಿವಿಧ ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಯವರು ರಾಮಪುರ ಗ್ರಾಮಸ್ಥರು ರಾಮಪುರ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರತಿಭಟನಾಕಾರರು ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಹೊರಟು ನಂತರ ಅಂಬಿಕಾಪುರದಿಂದ ರಾಮಪುರಕ್ಕೆ ವಾಪಸ್ ಪಾದಯಾತ್ರೆಯ ಮೂಲಕ ವಾಪಸ್ ಆಗಮಿಸುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಗುಂಡಿಗಳಲ್ಲಿ ತೆಂಗಿನ ಮರ ಹಾಗೂ ಇನ್ನಿತರ ಗಿಡಗಳನ್ನು ನೆಡುವ ಮೂಲಕ ಆಕ್ರೋಶ ಹೊರ ಹಾಕಿದರು. ನಂತರ ರಾಮಾಪುರ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರ ಹಾಗೂ ಶಾಸಕರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ನಂತರ ರಾಮಾಪುರದ ಯುವ ಮುಖಂಡ ಅಶ್ವತ್ ಮಾತನಾಡಿ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ದುರಸ್ತಿಗೊಂಡಿರುವುದರಿಂದ ಜೀವನ ಅಸ್ತವ್ಯಸ್ತವಾಗಿದೆ. ದ್ವಿಚಕ್ರ ವಾಹನ ಸವಾರರು ಸಂಚರಿಸಿದಷ್ಟ ಮಟ್ಟಿಗೆ ರಸ್ತೆ ಹಳ್ಳ ಗುಂಡಿಗಳಿಂದ ಕೂಡಿದೆ. ರಸ್ತೆ ಅಭಿವೃದ್ಧಿಪಡಿಸುವಂತೆ ಹಲವಾರು ವರ್ಷಗಳಿಂದ ಶಾಸಕರು, ಸಂಸದರು, ಸಚಿವರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ಹೋಬಳಿ ವ್ಯಾಪ್ತಿಯ ಎಲ್ಲಾ ಸಹಕಾರದೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಮುಂದಿನ ದಿನಗಳಲ್ಲಿ ನಮ್ಮ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇದಲ್ಲದೆ ರಾಮಪುರ ಹೋಬಳಿ ಕೇಂದ್ರದಲ್ಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಒಳಚರಂಡಿ ರಸ್ತೆ ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿ ಮಾಡದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದಲ್ಲದೆ ಕೆಲವು ಕಡೆ ಸ್ವಚ್ಛತೆ ಇಲ್ಲದೆ ಇರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ವತಿಯಿಂದ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಲೋಕೋಪಯೋಗಿ ಎಇಇ ಚಿನ್ನಣ್ಣ ಆಗಮಿಸಿ ಪ್ರತಿಭಟನಾಕಾರರ ಮನವಿಯನ್ನು ಪಡೆದು ನಂತರ ಮಾತನಾಡಿದ ಅವರು ಅಜ್ಜಿಪುರದಿಂದ ಅಂಬಿಕಾಪುರ ಗ್ರಾಮದವರೆಗೆ 10 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಗುರುವಾರದಿಂದಲೇ ಚಾಲನೆ ನೀಡಲಾಗಿದೆ. ಈ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ರಾಮಪುರದಿಂದ ಗರಿಕೆಕಂಡಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಪಡಿಸಲು ಅನುದಾನವಿದೆ, ಆದರೆ ಟೆಂಡರ್‌ನಲ್ಲಿ ಹೆಚ್ಚು ಜನ ಭಾಗವಹಿಸದೆ ಇರುವುದರಿಂದ ಸಮಸ್ಯೆಯಾಗಿದೆ. ಈಗಾಗಲೇ ಮೂರನೇ ಬಾರಿ ಟೆಂಡರ್ ಕರೆಯಲಾಗಿದ್ದು ಸೆಪ್ಟೆಂಬರ್ 4ರಂದು ಟೆಂಡರ್ ತೆರೆಯಲಾಗುವುದು ನಂತರ ಒಂದು ತಿಂಗಳೊಳಗೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಕೈ ಬಿಡಲಾಯಿತು.

ಸೂಕ್ತ ಪೊಲೀಸ್ ಬಂದೋಬಸ್ತ್: ವಿವಿಧ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಪ್ರತಿಭಟನೆ ಹಮ್ಮಿಕೊಂಡಿದ್ದ ಹಿನ್ನೆಲೆ ರಾಮಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪ್ರತಿಭಟನೆಯಲ್ಲಿ ಭಗತ್ ಯುವ ಸೇನೆ, ಕನ್ನಡ ರಕ್ಷಣಾ ವೇದಿಕೆ, ಲಾರಿ, ಆಟೋ ಚಾಲಕರು ಮಾಲೀಕರ ಸಂಘ ವಿವಿಧ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

17 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

30 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

41 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

1 hour ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago