ಚಾಮರಾಜನಗರ

ಅರಣ್ಯ ಇಲಾಖೆ ಕಚೇರಿ ಮುಂದೆ ದಿನಗೂಲಿ ನೌಕರನ ಶವವಿಟ್ಟು ಪ್ರತಿಭಟನೆ

ಗುಂಡ್ಲುಪೇಟೆ: ಕೆಲಸದ ಒತ್ತಡದಿಂದ ಅರಣ್ಯ ಇಲಾಖೆ ದಿನಗೂಲಿ ನೌಕರ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.

ತಾಲ್ಲೂಕಿನ ಗೋಪಾಲಪುರ ಗ್ರಾಮದ ಮಹೇಶ್‌ಗೆ (53 ) ಬ್ರೈನ್ ಸ್ಟ್ರೋಕ್ ಸಂಭವಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟ ಹಿನ್ನೆಲೆಯಲ್ಲಿ ಮೃತ ಮಹೇಶ್ ಕುಟುಂಬಸ್ಥರು ಹಾಗೂ ಗೋಪಾಲಪುರ ಗ್ರಾಮಸ್ಥರು ಮೃತ ಮಹೇಶ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಪ್ರತಿಭಟನೆ ನಡೆಸಿದರು.

ಮೃತ ಮಹೇಶ್ ಬಂಡೀಪುರ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕಳೆದ 28 ವರ್ಷಗಳಿಂದ ಕೆಲಸ ನಿರ್ವಹಿಸುತಿದ್ದರು. ಮೃತನಿಗೆ ಪತ್ನಿ, ಒಬ್ಬ ಹೆಣ್ಣು ಮಗಳಿದ್ದು ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ನೌಕರಿ ನಿಡುವಂತೆ ಮದ್ದೂರು ಚೆಕ್ ಪೋಸ್ಟ್ ಬಳಿ ಮೃತ ಮಹೇಶ್ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ 28 ವರ್ಷ ದಿನಗೂಲಿ ನೌಕರನಾಗಿದ್ದರೂ ನೌಕರಿ ಖಾಯಂ ಮಾಡಿಲ್ಲ. ಮೃತರಿಗೆ ಪರಿಹಾರ ಕೊಡಲು ಬರುವುದಿಲ್ಲ ಹಾಗೂ ಪಿಎಫ್ ಇಲ್ಲ ಎಂದರೆ ಕುಟುಂಬದವರು ಹೇಗೆ ಬದುಕುವುದು ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದು, ಪರಿಹಾರ ಹಾಗೂ ಕೆಲಸ ಕೊಡುವವರೆಗೂ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

11 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

19 hours ago