ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ ನೀವು ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ತಿಳಿಸಿದರು.
ಚಾಮರಾಜನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಮೈತ್ರಿ ಪಕ್ಷದ ನಿರ್ದೇಶಕರುಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ವೆಂಕಟೇಶ್ ರವರು ಹನೂರು ಕ್ಷೇತ್ರದಲ್ಲಿ ಓಡಾಟ ನಡೆಸಿ ಪಕ್ಷ ಸಂಘಟನೆ ಮಾಡಿ ಕಾರ್ಯಕರ್ತರನ್ನು ಪ್ರಬಲವಾಗಿ ಸಂಘಟಿತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಘವು ಲಾಭದಲ್ಲಿ ಇದೆಯೋ ನಷ್ಟದಲ್ಲಿ ಇದಿಯೋ ಎಂಬುದನ್ನು ಆಗಾಗ ಪರಿಶೀಲನೆ ಮಾಡಬೇಕು. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ ಕೊಟ್ಟು ರೈತರಿಗೆ ಬೆಂಬಲವಾಗಿರಬೇಕು ಎಂದು ಸಲಹೆ ನೀಡಿದರು.
ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನದ್ವನಿ ವೆಂಕಟೇಶ್ ಮಾತನಾಡಿ, ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರಿಗೆ ನಡೆದ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಎಂಟು ಜನ ಅಭ್ಯರ್ಥಿಗಳನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿರ್ದೇಶಕರು ಅಧ್ಯಕ್ಷರು ಕಳೆದ ಹಲವಾರು ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದಲ್ಲಿ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ದೊರಕಿಸಿಕೊಡದೆ ಇರುವುದರಿಂದ ಅವರನ್ನು ವಿಶ್ರಾಂತಿಗೆ ಕಳುಹಿಸಿದ್ದಾರೆ ಎಂದು ಶುಭ ಕೋರಿ ನೂತನ ಸದಸ್ಯರುಗಳನ್ನು ಗೌರವಿಸಿದರು.
ನೂತನ ನಿರ್ದೇಶಕರುಗಳಾದ ಸುಬ್ಬಮ್ಮ, ಚಂದ್ರಮ್ಮ, ಭದ್ರಯ್ಯ, ನಾಗರಾಜು ಕೆ, ತಂಗವೇಲು P G, ಕೃಷ್ಣ, ಕೃಷ್ಣಶೆಟ್ಟಿ, ಚಿನ್ನತಮ್ಮಭೋವಿರವರನ್ನು ಸನ್ಮಾನಿಸಲಾಯಿತು.
ಪ್ರಶಿಕ್ಷಣ ವಿಭಾಗ ಸಂಚಾಲಕರಾದ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪ್ರೊಫೆಸರ್ ಮಲ್ಲಿಕಾರ್ಜುನಪ್ಪ, ಹನೂರು ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೆಂಕಟೇಶ್, ನೂರೊಂದು ಶೆಟ್ಟಿ, ರಾಮಚಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೊನ್ನೂರ್ ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…
ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ.…
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…