ಚಾಮರಾಜನಗರ

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ ನೀವು ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ತಿಳಿಸಿದರು.

ಚಾಮರಾಜನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಮೈತ್ರಿ ಪಕ್ಷದ ನಿರ್ದೇಶಕರುಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ವೆಂಕಟೇಶ್ ರವರು ಹನೂರು ಕ್ಷೇತ್ರದಲ್ಲಿ ಓಡಾಟ ನಡೆಸಿ ಪಕ್ಷ ಸಂಘಟನೆ ಮಾಡಿ ಕಾರ್ಯಕರ್ತರನ್ನು ಪ್ರಬಲವಾಗಿ ಸಂಘಟಿತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.  ಸಂಘವು ಲಾಭದಲ್ಲಿ ಇದೆಯೋ ನಷ್ಟದಲ್ಲಿ ಇದಿಯೋ ಎಂಬುದನ್ನು ಆಗಾಗ ಪರಿಶೀಲನೆ ಮಾಡಬೇಕು. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ ಕೊಟ್ಟು ರೈತರಿಗೆ ಬೆಂಬಲವಾಗಿರಬೇಕು ಎಂದು ಸಲಹೆ ನೀಡಿದರು.

ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನದ್ವನಿ ವೆಂಕಟೇಶ್ ಮಾತನಾಡಿ, ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರಿಗೆ ನಡೆದ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಎಂಟು ಜನ ಅಭ್ಯರ್ಥಿಗಳನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿರ್ದೇಶಕರು ಅಧ್ಯಕ್ಷರು ಕಳೆದ ಹಲವಾರು ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದಲ್ಲಿ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ದೊರಕಿಸಿಕೊಡದೆ ಇರುವುದರಿಂದ ಅವರನ್ನು ವಿಶ್ರಾಂತಿಗೆ ಕಳುಹಿಸಿದ್ದಾರೆ ಎಂದು ಶುಭ ಕೋರಿ ನೂತನ ಸದಸ್ಯರುಗಳನ್ನು ಗೌರವಿಸಿದರು.

ನೂತನ ನಿರ್ದೇಶಕರುಗಳಾದ ಸುಬ್ಬಮ್ಮ, ಚಂದ್ರಮ್ಮ, ಭದ್ರಯ್ಯ, ನಾಗರಾಜು ಕೆ, ತಂಗವೇಲು P G, ಕೃಷ್ಣ, ಕೃಷ್ಣಶೆಟ್ಟಿ, ಚಿನ್ನತಮ್ಮಭೋವಿರವರನ್ನು ಸನ್ಮಾನಿಸಲಾಯಿತು.

ಪ್ರಶಿಕ್ಷಣ ವಿಭಾಗ ಸಂಚಾಲಕರಾದ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪ್ರೊಫೆಸರ್ ಮಲ್ಲಿಕಾರ್ಜುನಪ್ಪ, ಹನೂರು ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೆಂಕಟೇಶ್, ನೂರೊಂದು ಶೆಟ್ಟಿ, ರಾಮಚಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೊನ್ನೂರ್ ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

2 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

2 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

3 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

3 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

3 hours ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

4 hours ago