ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ ಮುಂಭಾಗದ ಟ್ಯಾಂಕ್, ಹುಲಸುಗುಡ್ಡೆ ಬೋರೆ ಸಮೀಪದ ಕಾವೇರಿ ನೀರು ಸಂಗ್ರಹಣ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹನೂರು ಪಟ್ಟಣದ ವಿವಿಧ ವಾರ್ಡ್ಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ವಾಟರ್ ಟ್ಯಾಂಕ್ ಸಮೀಪದ ಗೇಟ್ ವಾಲ್‌ಗಳಲ್ಲಿ ನೀರು ಪೋಲಾಗುತ್ತಿದ್ದು, ಕಸ ಕಡ್ಡಿಗಳು ತುಂಬಿ ಅನೈರ್ಮಲ್ಯದಿಂದ ಕೂಡಿದೆ. ಗೇಟ್ ವಾಲ್ಗಳು ತಳಮಟ್ಟದಲ್ಲಿ ಇರುವುದರಿಂದ ಮಳೆಯ ನೀರಿಗೆ ಕೊಳಚೆ ನೀರು ಸಂಗ್ರಹವಾಗುತ್ತಿದೆ. ಕೂಡಲೇ ವಾಲ್‌ಗಳು ಭೂಮಿಯ ಮೇಲ್ಭಾಗದಲ್ಲಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಟ್ಯಾಂಕ್ ತಳಭಾಗದ ವಾಲ್‌ಗಳಲ್ಲಿ ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ಇರುವುದನ್ನು ಕಂಡ ಶಾಸಕರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪಟ್ಟಣದ 13 ವಾರ್ಡಗಳಲ್ಲಿರುವ ಟ್ಯಾಂಕ್‌ಗಳನ್ನು ಮೂರು ದಿನಗಳಲ್ಲಿ ಸ್ವಚ್ಛ ಮಾಡಿ ನಿವಾಸಿಗಳಿಗೆ ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಟ್ಟಣ ವ್ಯಾಪ್ತಿಯ ಯಾವ ವಾರ್ಡ್ಗಳಲ್ಲಿ ಚರಂಡಿ, ರಸ್ತೆ ಇಲ್ಲದೇ ಇರುವ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಮೊದಲು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಾವು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ನಂತರ ನಾವು ಬೇರೆಯವರಿಗೆ ಸ್ವಚ್ಛತೆಯ ಪಾಠ ಮಾಡಬೇಕು. ನಾವೇ ಸ್ವಚ್ಛವಾಗಿಲ್ಲದಿದ್ದರೆ ಬೇರೆಯವರಿಗೆ ಏನನ್ನು ಹೇಳಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆನಂದ್, ಸದಸ್ಯ ಟಿ.ಸೋಮಶೇಖರ್, ಮುಖ್ಯಾಧಿಕಾರಿ ಅಶೋಕ್, ಮುಖಂಡರುಗಳಾದ ರಾಜುಗೌಡ, ಸತೀಶ್ ಮಹಾದೇವ, ವಿಜಯಕುಮಾರ್, ಅಮೀನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…