ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.
ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…