ಚಾಮರಾಜನಗರ

ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

lokesh

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago