ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್‌ನ ಸುನೀಲ್‌ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಶುಕ್ರವಾರ ಸಂಜೆ ಇಂಜಿನಿಯರ್ ಗಳಿಬ್ಬರು ಕಾಮಗಾರಿ ವೀಕ್ಷಣೆ ಮಾಡಿ ಕುದೇರು ಗ್ರಾಮದ ಬಳಿ ಲಂಚ ಸ್ವೀಕರಿಸುತ್ತಿದ್ದರು. ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಇಂಜಿನಿಯರ್ ಗಳಿಬ್ಬರ ವಿರುದ್ದ ದೂರು ದಾಖಲಿಸಿರುವುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…