ಚಾಮರಾಜನಗರ

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳಿಗೆ ತಾಜಾ ತರಕಾರಿ, ಆಹಾರ ಪದಾರ್ಥಗಳನ್ನು ಬಳಸಿ ಗುಣಮಟ್ಟದ ಪ್ರಸಾದ ವಿತರಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.

ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೇ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು.

ಪರಿಶೀಲನೆ ವೇಳೆ ದಾಸೋಹ ಭವನದ ಮೇಲುಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

1 hour ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

2 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

2 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

3 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

3 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

3 hours ago