Mysore
26
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಬಜೆಟ್‌ನಲ್ಲಿ ರೈಲ್ವೆ ಮಾರ್ಗ ಘೋಷಣೆ ಸಾಧ್ಯತೆ: ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದ್ದೇನೆ.

ಬೆಂಗಳೂರು ಕನಕಪುರ, ಕೊಳ್ಳೇಗಾಲ, ಚಾಮರಾಜನಗರ ರೈಲ್ವೆ ಮಾರ್ಗದ ಸರ್ವೆ ನಡೆಸಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜೊತೆಯೂ ಕೂಡ ಸುದೀರ್ಘ ಚರ್ಚೆ ನಡೆಸಿದ್ದೇನೆ. ಈ ಬಾರಿಯ ಬಜೆಟ್‌ನಲ್ಲಿ ಈ ರೈಲ್ವೆ ಮಾರ್ಗದ ಮಾರ್ಗಕ್ಕೆ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಇನ್ನೂ ಚಾಮರಾಜನಗರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿ, ನನ್ನನ್ನು ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿದ ಜನತೆಯ ಋಣ ತೀರಿಸುತ್ತೇನೆ ಎಂದರು.

Tags:
error: Content is protected !!