ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
ತಾಲ್ಲೂಕಿನ ಅಂಬಳೆ, ಯರಗಂಬಳ್ಳಿ,ಗುಂಬಳ್ಳಿ, ವೈ ಕೆ ಮೋಳೆ, ಕೆಸ್ತೂರು, ಹೊನ್ನೂರು ಸೇರಿದಂತೆ ಹಲವೆಡೆ ಜಮೀನುಗಳಲ್ಲಿ ನೀರು ನಿಂತಿದ್ದು, ಭತ್ತದ ಸಸಿ ನಾಟಿಗೆ ರೈತರು ಸಿದ್ಧತೆ ನಡೆಸಿದ್ದಾರೆ.
ಈ ಕುರಿತು ಅಂಬಳೆ ಗ್ರಾಮದ ರೈತ ಮಂಜು ಮಾತನಾಡಿ, “ಈ ಬಾರಿ ಸಮಯಕ್ಕೆ ಸರಿಯಾಗಿ ಮಳೆ ಬಾರದೆ ನಾವು ಕಂಗಲಾಗಿದ್ದೇವು, ಇವಾಗ ಒಂದು ವಾರದಿಂದ ಸುರಿದ ಮಳೆಗೆ ಗದ್ದೆಗಳಲ್ಲಿ ನೀರು ತುಂಬಿದೆ. ಮುಂದಿನ ದಿನಗಳಲ್ಲಿ ಇನ್ನೂ ಮಳೆ ಆದರೆ ಭತ್ತದ ಬೆಳೆಗೆ ತುಂಬಾ ಅನುಕೂಲವಾಗಲಿದೆ. ಕಳೆದ ವರ್ಷ ಮಳೆ ಕೊರತೆಯಿಂದ ತೊಂದರೆ ಅನುಭವಿಸಿದ್ದೆವು, ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದೇವೆ” ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ.
ಸತತ ಮಳೆಯಿಂದಾಗಿ ಕೆರೆ-ಕಟ್ಟೆಗಳಲ್ಲೂ ನೀರಿನ ಮಟ್ಟ ಹೆಚ್ಚಾಗಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…