ಚಾಮರಾಜನಗರ: ವರನಟ ಡಾ.ರಾಜಕುಮಾರ್ ಸಹೋದರಿ ನಾಗಮ್ಮ 94 ವರ್ಷ ಗಾಜನೂರಿನಲ್ಲಿ(95) ನಿಧನರಾಗಿದ್ದಾರೆ. ಇಂದು 11 ಗಂಟೆಯಲ್ಲಿ ಚಾಮರಾಜನಗರ ಜಿಲ್ಲೆಯ ತಾಳವಾಡಿ ತಾಲೂಕಿನ ಗಾಜನೂರಿನಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅಣ್ಣಾವ್ರು ರಾಜ್‌ಕುಮಾರ್ ಅವರು ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ಅವರು ವಾಸವಿದ್ದರು. ಈ ನಡುವೆ ಅವರು ಕೆಲವು ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಇದೀಗ ನಿಧನರಾಗಿದ್ದಾರೆ. ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಳಚಿದ ಕೊಂಡಿ ನಾಗಮ್ಮ ಅವರು ಡಾ. ರಾಜಕುಮಾರ್ ಅವರ ಸೋದರ ಸೋದರಿಯರ ಕೊನೆಯ ಕೊಂಡಿಯಾಗಿದ್ದರು. ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಅವರಿಗೆ ಡಾ. ರಾಜಕುಮಾರ್, ವರದರಾಜು, ಶಾರದಮ್ಮ, ನಾಗಮ್ಮ ನಾಲ್ವರು ಮಕ್ಕಳಿದ್ದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…