ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಎಸ್ ಐ ಈಶ್ವರ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ ರೋಡ್ ಸಮೀಪ ಸರಕು ಸಮೇತ ಆರೋಪಿಯನ್ನು ವಶಕ್ಕೆ ಪಡೆದು 6055 ರೂ ಮೌಲ್ಯದ ವಿವಿಧ ಕಂಪನಿಯ ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಎಎಸ್ಐ ಮಹಾದೇವ ಸ್ವಾಮಿ, ಮುಖ್ಯಪೇದೆ ಸಿದ್ದೇಶ್, ಪೇದೆ ಮಹೇಂದ್ರ, ಚಾಲಕ ಪರಮೇಶ್ ಹಾಜರಿದ್ದರು.
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…