ಚಾಮರಾಜನಗರ

ಅತ್ಯಾಚಾರ ಪ್ರಕರಣ: ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್‌ ಶಿಕ್ಷೆಗೆ ಗುರಿಯಾದ ಆರೋಪಿ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತ್‌ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಘಟನೆ ಹಿನ್ನಲೆ:

ಕ್ಲೀನರ್‌ ಆಗಿದ್ದ ಆರೋಪಿ ಕಾರ್ತಿಕ್‌ ಆ.26/2019ರಂದು ಸಂಜೆ ಸಮಯ ಕೊಳ್ಳೇಗಾಲ ಪಟ್ಟಣದ ಜೆಎಸ್ಎಸ್‌ ಕಾಲೇಜ್‌ ಸೇತುವೆ ಬಳಿ ಜಯಲಕ್ಷ್ಮಿ ಎಂಬುವವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸುದ್ದನು.

ಪ್ರಕರಣ ಸಂಬಂಧ ಕೊಳ್ಳೇಗಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಜೆ.ರಾಜೇಂದ್ರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.

ಅದರಂತೆ ವಿಚಾರಣೆ ನಡೆಸಿ, ನ್ಯಾಯಾಲಯವು ಈ ಪ್ರಕರಣದಲ್ಲಿ ಆರೋಪ ಸಾಬಿತಾದ ಕಾರಣ ಆರೋಪಿ ಕಾರ್ತಿಕ್‌ಗೆ ಐಪಿಸಿ ಕಲಂ 354(ಎ) 307ರಡಿ ಶಿಕ್ಷೆ ವಿಧಿಸಿದ್ದು, 4 ವರ್ಷಗಳ ಜೈಲು ಶಿಕ್ಷೆ ಮತ್ತು 5,000 ದಂಡ ವಿಧಿಸ ಆದೇಶ ಹೊರಡಿಸದೆ.

 

ಆಂದೋಲನ ಡೆಸ್ಕ್

Recent Posts

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

14 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

31 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

32 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

53 mins ago

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ…

1 hour ago

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

1 hour ago