Mysore
28
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ಉದ್ಯಮಿ ಆತ್ಮಹತ್ಯೆ

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮಹದೇವ ನಾಯಕ ಎಂಬ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವವರಾಗಿದ್ದಾರೆ.

ಬೆಟ್ಟದ ಕಡಿದಾದ ಪ್ರದೇಶದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್‌ ಮೂಲಕ ಪತ್ತೆ ಹಚ್ಚಿದ್ದಾರೆ. ಕಮರಿನ ನಡುವೆ ಶವ ಸಿಲುಕಿರುವುದು ಪತ್ತೆಯಾಗಿದ್ದು, ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ.

ಮೂಲತಃ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯ ಕುಂಬಾರಹಳ್ಳಿಯ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದರು ಮಹದೇವನಾಯಕ. ಇವರು ಮೇ.5 ರಂದು ನಾಪತ್ತೆಯಾಗಿದ್ದರು. ಈ ಸಂಬಂಧ ಕವಲಂದೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಇವರ ಬೈಕ್‌ ಜೂನ್‌.6 ರಂದು ಬಿಳಿಗಿರಿರಂಗನ ಬೆಟ್ಟದ ಬಳಿ ಪತ್ತೆಯಾಗಿತ್ತು. ಇದರ ಜಾಡು ಹಿಡಿದು ಹೊರ ಪೊಲೀಸರಿಗೆ ಬೆಟ್ಟದ ಕಮರಿಯಲ್ಲಿ ಅವರ ದೇಹ ಪತ್ತೆಯಾಗಿರುವುದು ಕಂಡುಬಂದಿದೆ.

ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಿಖರ ಕಾರಣ ಕಂಡುಬಂದಿಲ್ಲ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!