ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮಹದೇವ ನಾಯಕ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವವರಾಗಿದ್ದಾರೆ.
ಬೆಟ್ಟದ ಕಡಿದಾದ ಪ್ರದೇಶದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್ ಮೂಲಕ ಪತ್ತೆ ಹಚ್ಚಿದ್ದಾರೆ. ಕಮರಿನ ನಡುವೆ ಶವ ಸಿಲುಕಿರುವುದು ಪತ್ತೆಯಾಗಿದ್ದು, ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ.
ಮೂಲತಃ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಮಹದೇವನಾಯಕ. ಇವರು ಮೇ.5 ರಂದು ನಾಪತ್ತೆಯಾಗಿದ್ದರು. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನು ಇವರ ಬೈಕ್ ಜೂನ್.6 ರಂದು ಬಿಳಿಗಿರಿರಂಗನ ಬೆಟ್ಟದ ಬಳಿ ಪತ್ತೆಯಾಗಿತ್ತು. ಇದರ ಜಾಡು ಹಿಡಿದು ಹೊರ ಪೊಲೀಸರಿಗೆ ಬೆಟ್ಟದ ಕಮರಿಯಲ್ಲಿ ಅವರ ದೇಹ ಪತ್ತೆಯಾಗಿರುವುದು ಕಂಡುಬಂದಿದೆ.
ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಿಖರ ಕಾರಣ ಕಂಡುಬಂದಿಲ್ಲ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…