ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ ಮಾಡಿದ್ದ ಮಹಿಳೆಯ ಮೇಲೆ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ 108 ಅಡಿ ಮಹದೇಶ್ವರ ಪ್ರತಿಮೆ ಸ್ಥಾಪಿಸಿ ತಳಭಾಗದಲ್ಲಿ ಮಹದೇಶ್ವರರ ಜೀವನ ಚರಿತ್ರೆಯುಳ್ಳ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಸ್ಥಳದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.
ಆದರೆ ಓರ್ವ ಮಹಿಳೆ ಅಕ್ರಮ ಪ್ರವೇಶ ಮಾಡಿ ಹಿಟಾಚಿಯ ಬಕೆಟ್‌ನಲ್ಲಿ ಕುಳಿತು ಮಹದೇಶ್ವರನ ದರ್ಶನ ಪಡೆಯುವಂತೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು.
ಈ ಬಗ್ಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಮಹಿಳೆಯ ವಿರುದ್ಧ ಆಕ್ರೋಶ ಹೂರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟದ ಸಬ್ ಇನ್ಸ್‌ಪೆಕ್ಟರ್ ಜಯರಾಮುರವರ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.





