ಚಾಮರಾಜನಗರ

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ ಮಾಡಿದ್ದ ಮಹಿಳೆಯ ಮೇಲೆ ಪ್ರಕರಣ ದಾಖಲಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ 108 ಅಡಿ ಮಹದೇಶ್ವರ ಪ್ರತಿಮೆ ಸ್ಥಾಪಿಸಿ ತಳಭಾಗದಲ್ಲಿ ಮಹದೇಶ್ವರರ ಜೀವನ ಚರಿತ್ರೆಯುಳ್ಳ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಸ್ಥಳದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

ಆದರೆ ಓರ್ವ ಮಹಿಳೆ ಅಕ್ರಮ ಪ್ರವೇಶ ಮಾಡಿ ಹಿಟಾಚಿಯ ಬಕೆಟ್‌ನಲ್ಲಿ ಕುಳಿತು ಮಹದೇಶ್ವರನ ದರ್ಶನ ಪಡೆಯುವಂತೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು.

ಈ ಬಗ್ಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಮಹಿಳೆಯ ವಿರುದ್ಧ ಆಕ್ರೋಶ ಹೂರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟದ ಸಬ್ ಇನ್ಸ್‌ಪೆಕ್ಟರ್ ಜಯರಾಮುರವರ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

41 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

48 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

4 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

18 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

19 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

20 hours ago