Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು: ಚಾಮುಲ್ ನಿರ್ದೇಶಕ ಮಹದೇವಸ್ವಾಮಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು ಕೇವಲ ಅವರ ಜಯಂತಿ ಆಚರಿಸಿದರೆ ಸಾಲದು, ಅವರ ಬದುಕಿನ ಆದರ್ಶಗಳನ್ನು ಅನುಸರಿಸಬೇಕು’ ಎಂದು ಚಾಮುಲ್ ನಿರ್ದೇಶಕರಾದ ಮಹದೇವಸ್ವಾಮಿ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದಿನ ಕಾಲದ ಮಹಾಪುರುಷರು ಬಹಳ ಕಷ್ಟ ಪಟ್ಟು ಸಮಾಜದ ಉನ್ನತಿಗಾಗಿ ಅನೇಕ ರೀತಿಯಲ್ಲಿ ಶ್ರಮಿಸಿದ್ದಾರೆ. ಸಮಾನತೆ, ಮನುಕುಲದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟುಕೊಂಡು ವಚನ, ಸಾಹಿತ್ಯವನ್ನು ರಚಿಸಿದ್ದಾರೆ. ನಾವೆಲ್ಲರೂ ಶರಣರ ಆಚಾರ ವಿಚಾರ ಮುಂದುವರೆಸುತ್ತಾ ಜೀವನದಲ್ಲಿ ಅಳವಡಿಸಿಕೊಂಡು, ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಅಗತ್ಯವಿದೆ, ಮಹಾತ್ಮರ ಜಯಂತಿಗಳನ್ನು ಆಚರಿಸುವುದೆ ಸಂತಸ. ಆದರೆ ಎಲ್ಲಾ ಮಹನೀಯರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಮಾಡಿದರೆ ಒಳಿತು ಎಂದು ಮನವಿ ಮಾಡಿದರು.

ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರು ಜಾತಿ, ಮತ, ಪಂಥಗಳಿಗೆ ಸೇರಿದವರಲ್ಲ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿದವರು. ಜಾತಿ, ವರ್ಣ ಭೇದವಿಲ್ಲದೆ ಭಕ್ತಿ ಮಾರ್ಗವನ್ನು ಸಾರಿದ ಮಹಾನ್‌ ತತ್ವಜ್ಞಾನಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ರಮೇಶ್, ಶೀರಸ್ತೆದ್ದಾರ್ ಮಾದೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಸಮುದಾಯದ ಮುಖಂಡರುಗಳಾದ ಸದಾಶಿವಮೂರ್ತಿ, ಜಗದೀಶ್, ಕುಮಾರ್, ಶಾಗ್ಯ ರವಿ, ಶಾಂತರಾಜು, ಹರೀಶ್, ಮೋಹನ್, ಶಿವಕುಮಾರ್, ನಾಗೇಂದ್ರ, ಮಾದೇಶ್, ಜಯಣ್ಣ, ಪ್ರಕಾಶ್ ಹಾಗೂ ಇನ್ನಿತರರು ಹಾಜರಿದ್ದರು.

Tags:
error: Content is protected !!