ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು ಕೇವಲ ಅವರ ಜಯಂತಿ ಆಚರಿಸಿದರೆ ಸಾಲದು, ಅವರ ಬದುಕಿನ ಆದರ್ಶಗಳನ್ನು ಅನುಸರಿಸಬೇಕು’ ಎಂದು ಚಾಮುಲ್ ನಿರ್ದೇಶಕರಾದ ಮಹದೇವಸ್ವಾಮಿ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದಿನ ಕಾಲದ ಮಹಾಪುರುಷರು ಬಹಳ ಕಷ್ಟ ಪಟ್ಟು ಸಮಾಜದ ಉನ್ನತಿಗಾಗಿ ಅನೇಕ ರೀತಿಯಲ್ಲಿ ಶ್ರಮಿಸಿದ್ದಾರೆ. ಸಮಾನತೆ, ಮನುಕುಲದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟುಕೊಂಡು ವಚನ, ಸಾಹಿತ್ಯವನ್ನು ರಚಿಸಿದ್ದಾರೆ. ನಾವೆಲ್ಲರೂ ಶರಣರ ಆಚಾರ ವಿಚಾರ ಮುಂದುವರೆಸುತ್ತಾ ಜೀವನದಲ್ಲಿ ಅಳವಡಿಸಿಕೊಂಡು, ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಅಗತ್ಯವಿದೆ, ಮಹಾತ್ಮರ ಜಯಂತಿಗಳನ್ನು ಆಚರಿಸುವುದೆ ಸಂತಸ. ಆದರೆ ಎಲ್ಲಾ ಮಹನೀಯರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಮಾಡಿದರೆ ಒಳಿತು ಎಂದು ಮನವಿ ಮಾಡಿದರು.
ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರು ಜಾತಿ, ಮತ, ಪಂಥಗಳಿಗೆ ಸೇರಿದವರಲ್ಲ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿದವರು. ಜಾತಿ, ವರ್ಣ ಭೇದವಿಲ್ಲದೆ ಭಕ್ತಿ ಮಾರ್ಗವನ್ನು ಸಾರಿದ ಮಹಾನ್ ತತ್ವಜ್ಞಾನಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ರಮೇಶ್, ಶೀರಸ್ತೆದ್ದಾರ್ ಮಾದೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಸಮುದಾಯದ ಮುಖಂಡರುಗಳಾದ ಸದಾಶಿವಮೂರ್ತಿ, ಜಗದೀಶ್, ಕುಮಾರ್, ಶಾಗ್ಯ ರವಿ, ಶಾಂತರಾಜು, ಹರೀಶ್, ಮೋಹನ್, ಶಿವಕುಮಾರ್, ನಾಗೇಂದ್ರ, ಮಾದೇಶ್, ಜಯಣ್ಣ, ಪ್ರಕಾಶ್ ಹಾಗೂ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…