ಚಾಮರಾಜನಗರ

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು, ಉಡುತೊರೆಹಳ್ಳ ಯೋಜನೆಯಡಿ 490 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ.

ಚಾಮರಾಜನಗರ ಸಂಸದ ಸುನಿಲ್ ಬೋಸ್ ಅವರು ಲೋಕಸಭಾ ಚುನಾವಣಾ ಸಮಯದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು, ಕೌದಳ್ಳಿ, ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳು ಕುಡಿಯುವ ನೀರಿಗೆ ತೊಂದರೆ ಇರುವ ಬಗ್ಗೆ ಮತ್ತು ಅಂತರ್ಜಲ ಮಟ್ಟವು ವ್ಯಾಪಕವಾಗಿ ಕುಸಿದಿರುವ ಬಗ್ಗೆ ಜನರಿಂದ ವ್ಯಾಪಕವಾದ ಮನವಿ ಬಂದಿದ್ದ ಹಿನ್ನಲೆಯಲ್ಲಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲೇಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಜೊತೆಗೆ ಹನೂರು ಭಾಗದಲ್ಲಿ ನೀರಾವರಿ ಸಮಸ್ಯೆಯಿಂದ ಉಂಟಾಗಿರುವ ಸಾಮಾಜಿಕ ಮತ್ತು ಆರ್ಥಿಕ ತೊಂದರೆಯ ಬಗ್ಗೆಯೂ ಸಹ ಮಾನ್ಯ ಸಂಸದರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಮನವಿಗೆ ಪೂರಕವಾಗಿ ಇದೀಗ ಕುರಟ್ಟಿ ಹೊಸೂರು, ಕೌದಳ್ಳಿ, ಮಾರ್ಟಳ್ಳಿ ಸೇರಿದಂತೆ ಹನೂರು ತಾಲ್ಲೂಕಿನ ಸುಮಾರು 9 ಗ್ರಾಮ ಪಂಚಾಯತಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಭಾಗದ ಕೆರೆಗಳು ಮತ್ತು ಚೆಕ್ ಡ್ಯಾಂ ಅನ್ನು ತುಂಬಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಉಡುತೊರೆಹಳ್ಳ ಯೋಜನೆಯನ್ನು ಘೋಷಣೆ ಮಾಡಿದ್ದು ಈ ಯೋಜನೆಗಾಗಿ 490 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ.

ಈ ಐತಿಹಾಸಿಕವಾದ ನಿರ್ಧಾರದಿಂದ ಹನೂರು ತಾಲ್ಲೂಕಿನ ರೈತರು ಮತ್ತು ಜನ ಸಾಮಾನ್ಯರಿಗೆ ಅನುಕೂಲ ಆಗಲಿದ್ದು, ಇಂತಹ ಮಹತ್ವದ ಯೋಜನೆಯು ಜಾರಿಯಾಗಲು ವ್ಯವಸ್ಥಿತವಾಗಿ ಶ್ರಮಿಸಿದ ಮಾನ್ಯ ಚಾಮರಾಜನಗರ ಸಂಸದರಾದ ಸುನಿಲ್ ಬೋಸ್ ಅವರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

41 mins ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

47 mins ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

1 hour ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

1 hour ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

1 hour ago

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…

2 hours ago