Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Road accident: Youth dies in Chamarajanagar

ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.

ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ರಾತ್ರಿ ಸಂತೋಷ್ ಬೈಕ್‌ನಲ್ಲಿ ಗುಂಡ್ಲುಪೇಟೆ-ಚಾ.ನಗರ ರಸ್ತೆಯಲ್ಲಿ ಬರುವಾಗ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಸಂತೋಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಗರ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!