Road accident: Youth dies in Chamarajanagar
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.
ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ರಾತ್ರಿ ಸಂತೋಷ್ ಬೈಕ್‌ನಲ್ಲಿ ಗುಂಡ್ಲುಪೇಟೆ-ಚಾ.ನಗರ ರಸ್ತೆಯಲ್ಲಿ ಬರುವಾಗ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಸಂತೋಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಗರ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…