ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ.
ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ವರದರಾಜು ಎಂಬುವವರ ಮನೆಯ ಬೀರುವಿನಲ್ಲಿದ್ದ 97 ಸಾವಿರ ನಗದು ಹಾಗೂ 10 ಗ್ರಾಂ ಚಿನ್ನದ ಓಲೆಗಳನ್ನು ಕಳ್ಳತನ ಮಾಡಲಾಗಿದೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಇನ್ನು ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಮನೆಗಳನ್ನೇ ಟಾರ್ಗೆಟ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…
ಪ್ರಶಾಂತ್ ಎಸ್. ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…
ಮಂಜು ಕೋಟೆ ಎಚ್.ಡಿ.ಕೋಟೆ : ಕಠಿಣ ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಅತ್ಯುನ್ನತ ಹುದ್ದೆ ಪಡೆಯಬಹುದು ಎಂಬುದಕ್ಕೆ ಪಟ್ಟಣದ ನಿವಾಸಿ…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…