ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.
ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ ಅವಧಿಯಲ್ಲಿ 2. 85 ಕೋಟಿ ರೂ. ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿನ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ರಾತ್ರಿ 8 ಗಂಟೆಗೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಈ ಎಣಿಕೆಯಲ್ಲಿ 2,85,60,937 ರೂ. ನಗದು ಹಣ, 27 ಗ್ರಾಂ ಚಿನ್ನ ಹಾಗೂ 1800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಭಕ್ತರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಶಿವರಾತ್ರಿ ಹಬ್ಬದ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಮಾದಪ್ಪನನ್ನು ಕಣ್ತುಂಬಿಕೊಂಡಿದ್ದರು.