ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಜರ್ಮನ್ ಸಿದ್ದರಾಜು ಅವರ ಮನೆಯ ಮುಂದೆ ಶನಿವಾರ ರಾತ್ರಿ ಎರಡು ಗಂಟೆ ವೇಳೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಯಾರೋ ಐವರು ಆಸಾಮಿಗಳು ಮುಖಕ್ಕೆ ಕಪ್ಪು ಬಟ್ಟೆ ಸುತ್ತಿಕೊಂಡು ಆದಿ ಜಾಂಬವ ಬಡಾವಣೆಯ ಕಡೆಗೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಗ್ರಾಮದ ಜನರು ಆತಂಕದಲ್ಲಿದ್ದಾರೆ.
ಇನ್ನು ಈ ವಿಚಾರವನ್ನು ಗ್ರಾಮಸ್ಥರು ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸರಿಗೆ ತಿಳಿಸಿದ್ದಾರೆ. ರಾತ್ರಿ ವೇಳೆ ಹೆಚ್ಚಿನ ಗಸ್ತು ಮಾಡಲು ವಿಶೇಷ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಯಾರೋ ಆಸಾಮಿಗಳು ಕಾಮಗೆರೆ ಗ್ರಾಮದಲ್ಲಿ ರಾತ್ರಿ ವೇಳೆ ಗುಂಪಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ನಮ್ಮ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಆದೇಶದ ಮೇರೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಗಸ್ತು ನಡೆಸಲಾಗುವುದು. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ಆಸಾಮಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…