ಚಾಮರಾಜನಗರ

ಕೊಳ್ಳೇಗಾಲದಲ್ಲಿ ಕಾಡಾನೆಗಳ ಓಡಾಟ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೊಳ್ಳೇಗಾಲ ಪಟ್ಟಣದ ಡಾ.ರಾಜ್‌ ಕುಮಾರ್‌ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ ಗಂಟೆಯ ಸಮಯದಲ್ಲಿ ಎರಡು ಕಾಡಾನೆಗಳು ಸಂಚಾರ ಮಾಡಿರುವ ದೃಶ್ಯ ಕಂಡು ಬಂದಿದೆ. ಈ ದೃಶ್ಯವನ್ನು ಪೆಟ್ರೋಲ್‌ ಬಂಕ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಸೆರೆ ಹಿಡಿದಿದೆ.

ಕಾಡಾನೆಗಳು ರಸ್ತೆಯಲ್ಲಿ ಸಂಚಾರಿಸುತ್ತಿರುವಾಗ ಪೆಟ್ರೋಲ್‌ ಬಂಕ್‌ ಒಳಗೆ ಬಂದು ಓಡಾಟ ಮಾಡಿ, ಬಳಿಕ ಮತ್ತೆ ರಸ್ತೆಗೆ ತೆರಳಿದ ದೃಶ್ಯ ಸಿಸಿ ಟಿ.ವಿ.ಯಲ್ಲಿ ಸೆರೆಯಾಗಿದೆ. ಇದೇ ವೇಳೆ ರಸ್ತೆಯಲ್ಲಿ ಆನೆ ಬರುವುದನ್ನು ಕಂಡ ಪೆಟ್ರೋಲ್‌ ಬಂಕ್‌ ಸಿಬ್ಬಂದಿಗಳು ಹೆದರಿ ಸ್ಥಳದಿಂದಲೇ ಪರಾರಿಯಾಗಿದ್ದಾರೆ. ಅಲ್ಲದೇ ಈ ವಿಚಾರವನ್ನು ಅರಣ್ಯ
ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖೆಯವರು ಇದೀಗ ಕಾಡಾನೆಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

1 hour ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

6 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

6 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

6 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago