ಹನೂರು: ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ . ಈ ನಿಟ್ಟಿನಲ್ಲಿ ಬರುವ ಅತಿಥಿಗಣ್ಯರನ್ನು ಅಚ್ಚುಕಟ್ಟಾಗಿ ಸತ್ಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ತಿಳಿಸಿದರು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿಒಡ್ಡಿನ ಆವರಣದಲ್ಲಿ ಏಪ್ರಿಲ್ 24ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಸಂಬಂಧ ಕರೆಯಲಾಗಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ಚೆಲುವ ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಜ್ವಲಂತ ಸಮಸ್ಯೆಗಳು ಬಗೆಹರಿಯುವ ವಿಶ್ವಾಸದಲ್ಲಿದ್ದೇವೆ .ಈಗಾಗಲೇ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಇಲಾಖಾವಾರು ಅನುದಾನದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ .ಪ್ರಮುಖವಾಗಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ವಸತಿ, ಪ್ರವಾಸೋದ್ಯಮ, ರಸ್ತೆ ಸೇತುವೆ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಸಹ ಚಾಮರಾಜನಗರ ಜಿಲ್ಲೆಗೆ ಏಳು ಬಾರಿ ಆಗಮಿಸಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಸ್ಥಳದ ಆವರಣದಲ್ಲಿ ಏಪ್ರಿಲ್ 24ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಚಿವರೆಲ್ಲರೂ ಆಗಮಿಸುವ ಹಿನ್ನೆಲೆ ಈಗಾಗಲೇ 20 ಸಮಿತಿಗಳನ್ನು ರಚನೆ ಮಾಡಿ ಪ್ರತಿಯೊಂದು ಸಮಿತಿಗೆ ಒಂದೊಂದು ಜವಾಬ್ದಾರಿಯನ್ನು ನೀಡಲಾಗಿದೆ. ಜವಾಬ್ದಾರಿ ಪಡೆದುಕೊಂಡಿರುವ ಅಧಿಕಾರಿಗಳು ವಸತಿ ಹಾಗೂ ಶಿಷ್ಟಾಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ನೀಡಬೇಕು. ಯಾವುದೇ ಲೋಪದೋಷಗಳು ಆಗದಂತೆ ಗಮನಹರಿಸಬೇಕು. ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬರನ್ನು ಸತ್ಕಾರ ಮಾಡಬೇಕು ಯಾರೊಬ್ಬರು ಬೇಸರ ಮಾಡಿಕೊಳ್ಳಬಾರದು. ಈ ಒಂದು ಕಾರ್ಯಕ್ರಮ ಇತಿಹಾಸ ಪುಟದಲ್ಲಿ ಸೇರುವಂತೆ ಪ್ರತಿಯೊಬ್ಬರು ಯಶಸ್ವಿಗೆ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಸಹ ಸಹಕಾರ ನೀಡುತ್ತೇವೆ ಒಟ್ಟಾರೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಯಶಸ್ವಿಯಾಗಬೇಕು. ಪಾಸ್ ನೀಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಮಾತ್ರ ಸಚಿವ ಸಂಪುಟ ಸ್ಥಳದಲ್ಲಿ ಇರಬೇಕು. ಇದನ್ನು ಹೊರತುಪಡಿಸಿ ಬೇರೆ ಯಾರು ಅಡ್ಡಾದಿಡ್ಡಿ ಓಡಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರ .ಇದು ನನ್ನ ಪಾಲಿಗೆ ಜೀವನದಲ್ಲಿ ಮರೆಯಲಾಗದ ದಿನವಾಗಲಿದೆ. ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಇಲಾಖಾವಾರು ಮಾಸ್ಟರ್ ಪ್ಲಾನ್ ರೀತಿಯಲ್ಲಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೀರಾವರಿ, ರಸ್ತೆ, ವಿದ್ಯುತ್ ಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರುಗಳಿಗೆ ಮನವಿ ಮಾಡಿದ್ದೇನೆ. ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಸಾವಿರ ಎಕರೆಯಲ್ಲಿ ಸೋಲಾರ್ ಮೂಲಕ ವಿದ್ಯುತ್ ತಯಾರಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಲಾಗಿದೆ. ಹನೂರು ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕ್ಷೇತ್ರದಲ್ಲಿ ಕಾರ್ಖಾನೆಗಳು ಇಲ್ಲದೆ ಇರುವುದರಿಂದ ಉದ್ಯೋಗ ಸೃಷ್ಟಿ ಮಾಡಲು ಪ್ರಥಮ ಆದ್ಯತೆ ನೀಡಲಾಗಿದೆ. ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಕಳೆದ 20 ವರ್ಷಗಳಿಂದ ಕುಂಠಿತವಾಗಿರುವ ಅಭಿವೃದ್ಧಿಗೆ ಚಾಲನೆ ಸಿಗಲಿದೆ. ಹನೂರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿಕೊಳ್ಳಲಾಗಿದ್ದು ಯು ಜಿ ಡಿ, ರಸ್ತೆ ಮನೆಮನೆಗೆ ನೀರು ಕೊಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಉದ್ಘಾಟನೆ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಮುಗಿದ ನಂತರ ದೀಪದ ಗಿರಿ ವಡ್ಡುವಿನಲ್ಲಿ ನಿರ್ಮಾಣ ಮಾಡಿರುವ ಮಲೆ ಮಹದೇಶ್ವರ ಮ್ಯೂಸಿಯಂ, 376 ವಸತಿಗೃಹಗಳು ದೊಡ್ಡಕೆರೆ ಮೈದಾನ , ಯುಜಿಡಿ,ಸೋಲಾರ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ ಎಂದು ಶಾಸಕರು ತಿಳಿಸಿದರು.
ಭೂಮಿ ಪೂಜೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಸಚಿವ ಸಂಪುಟದ ನಂತರ ಒಂದೇ ಬಾರಿಗೆ 4 ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಲು ದಾಸೋಹ ಭವನ, ಹನೂರು ಪಟ್ಟಣದ ಸ್ವಾಗತ ಕಮಾನು, ಆಲಂಬಾಡಿ ಜುಂಜೇಗೌಡರ ದೇವಸ್ಥಾನ ಜೀವನೋದ್ಧಾರ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದರು.
ದರ್ಶನಕ್ಕೆ ನಿರ್ಬಂಧವಿಲ್ಲ : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆ ಭಕ್ತಾದಿಗಳಿಗೆ ಯಾವುದೇ ರೀತಿ ತೊಂದರೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸೂಚನೆ ನೀಡಿರುವ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನಕ್ಕೆ ಯಾವುದೇ ರೀತಿಯ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ಸ್ಪಷ್ಟಪಡಿಸಿದ್ದಾರೆ.
ಇನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳು ಬರಲಿರುವ ಹೆಲಿಫ್ಯಾಡ್ ಸ್ಥಳ, ದಾಸೋಹ ಭವನದ ಭೂಮಿ ಪೂಜೆ ಸೇರಿದಂತೆ ಇನ್ನಿತರ ಸ್ಥಳ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ,ಎಡಿಸಿ ಗೀತಾ ಹುಡೇದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಉಪ ವಿಭಾಗಾಧಿಕಾರಿ ಮಹೇಶ್ , ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಸಿಲ್ದಾರ್ ವೈ ಕೆ ಗುರುಪ್ರಸಾದ್, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…