ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.
ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ.
ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.





