ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್ ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು.
ಇವರಿಬ್ಬರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಸತ್ತೇಗಾಲ ಕಡೆಗೆ ತೆರಳುವಾಗ ಕೊಳ್ಳೇಗಾಲದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಿಂದ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, ಕಾರು ಸವಾರನ ಸಮೇತ ಹಳ್ಳಕ್ಕೆ ನುಗ್ಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ತಂದಿರಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.





