ಚಾಮರಾಜನಗರ

ಶಿಕ್ಷಕನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಪೊಲೀಶ್‌ ವಶ

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ವಸತಿ ಪ್ರೌಢಾಶಾಲೆಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

17 ವರ್ಷದ ಬಾಲಕ ಬುಡಕಟ್ಟು ಸಮುದಾಯದವನಾಗಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆದಿದ್ದ. ಬಾಲಕನ ಕೊನೆಯ ಪರೀಕ್ಷೆ ದಿನ ಸಲಿಂಗಕಾಮಿಯಾಗಿರುವ ಶಿಕ್ಷಕ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದ ವಿದ್ಯಾರ್ಥಿಯನ್ನು ತನ್ನ ಕೊಠಡಿಗೆ ಕರೆಯಿಸಿ, ಬಾಲಕನಿಗೆ ಮದ್ಯಪಾನ, ದೂಮಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕನು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕರಿಗೆ ಏಪ್ರಿಲ್‌ 12 ರಂದು ದೂರು ನೀಡಿದ್ದಾನೆ. ಒಡನಾಡಿ ನಿರ್ದೇಶಕ ಪರಸುರಾಮ್‌ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್‌ ಅವರಿಗೆ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಶಿಕ್ಷಕ ಹಿಂದಿನಿಂದಲೂ ಇಂತಹ ಕೃತ್ಯ ಮಾಡಿಕೊಂಡು ಬಂದಿದ್ದಾನೆ ಎನ್ನಲಾಗಿದೆ. ಹಲವು ವರ್ಷಗಳಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಾ ಬಂದಿದ್ದಾನೆ ಎಂದು ದೂರಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago