ಶ್ರೀರಂಗಪಟ್ಟಣ : ಮುಸ್ಲಿಮರನ್ನು ಅವಹೇಳನ ಮಾಡಿ, ಅಧಿಕಾರಿಯನ್ನು ನೇಣಿಗೆ ಏರಿಸುವುದಾಗಿ ಹೇಳಿಕೆ ನೀಡಿರುವ ಶ್ರೀರಂಗಪಟ್ಟಣ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರನ್ನು ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಎದುರು ಜಮಾವಣೆಗೊಂಡ ಎಸ್‌ಡಿಪಿಐ ಕಾರ್ಯಕರ್ತರು, ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಬಿಜೆಪಿ ಹಾಗೂ ಜಾ.ದಳ ಒಂದಾದರು ಎಂಬ ಒಂದೇ ಒಂದು ಕಾರಣಕ್ಕೆ ಮುಸಲ್ಮಾನರು ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಆದರೆ, ಅವರು ಮುಸಲ್ಮಾನರಿಗೆ ಅವಹೇಳನ ಮಾಡಿ ಕಾಂಗ್ರೆಸ್ ಮಾತ್ರವಲ್ಲದೆ ದೇಶದ ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ಮುಸಲ್ಮಾನರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದರೆ, ಸಾರ್ವಜನಿಕವಾಗಿ ಅಂತಹವರಿಗೆ ಯಾವುದೇ ದಾಖಲೆಗಳನ್ನು ಮಾಡಿಕೊಟ್ಟರೆ ಅಂತಹವರನ್ನು ನೇಣಿಗೆ ಹಾಕುತ್ತೇನೆಂಬ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ. ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕೂಡಲೇ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸುವುದುರ ಜೊತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ಉಪತಹಸಿಲ್ದಾರ್ ಕೆ.ಎನ್.ಚೈತ್ರಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…