ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು ಪಡೆದುಕೊಂಡಿದ್ದ ಜವರಯ್ಯ ಹಾಗೂ ನೇತ್ರಾ ಬಂಧಿತರು.
ಚಾ.ನಗರದ ರಾಮಸಮುದ್ರದಲ್ಲಿ ವಾಸವಿರುವ ಸಿಂಧು ಹಾಗೂ ಮಂಜುನಾಯಕ ದಂಪತಿಗೆ ಕಳೆದ ಜುಲೈ 26ರಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿತ್ತು. ಬಳಿಕ ದಂಪತಿಯ ಬಳಿ ಮಗು ಇಲ್ಲದಿರುವ ಬಗ್ಗೆ ಸಲ್ಲಿಕೆಯಾದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಷಕರನ್ನು ವಿಚಾರಣೆಗೊಳಪಡಿಸಿದಾಗ ಮಾರಾಟ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಮಗು ಆರೋಗ್ಯಯುತವಾಗಿದ್ದು ಶಿಶು ಅಭಿವೃದ್ಧಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚುವರಿ ಎಸ್‌ಪಿ ಎಂ.ಎನ್.ಶಶಿಧರ್, ಡಿವೈಎಸ್‌ಪಿ ಸ್ನೇಹಾರಾಜ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಎಂ.ಜಗದೀಶ್, ಪಿಎಸ್ಐ ಆರ್.ಮಂಜುನಾಥ್ ಅವರನ್ನೊಳಗೊಂಡ ತಂಡದವರು ಭಾಗವಹಿಸಿದ್ದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…