ಚಾಮರಾಜನಗರ

ಹನೂರು | ಸಾಲು ಸಾಲು ವನ್ಯಜೀವಿ ಸಾವು : ಪ್ರಾಣಿಪ್ರಿಯರಲ್ಲಿ ಆತಂಕ

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

ಹನೂರು ವಲಯದ ಬಂಡಳ್ಳಿ ಶಾಖೆಯ ಮೇಕೆದಾಟು ಗಸ್ತಿನ ತಮ್ಮಡಿ ಬಾವಿ ಹಳ್ಳ ಕಾಡು ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅಂದಾಜು 5 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ಚಿರತೆಯ ಹಿಂಗಾಲುಗಳ ಪಾರ್ಶ್ವ ವಾಯುವಿನಿಂದ ಸ್ವಾಧೀನ ಕಳೆದುಕೊಂಡಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯವೆಂದು ಭಾವಿಸಿದರೂ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪ್ರಮುಖ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಎನ್‌ಟಿಸಿಎ ಸದಸ್ಯರನ್ನೊಳಗೊಂಡ ತಂಡದ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ನಿಯಮಾನುಸಾರ ಸುಡಲಾಯಿತು ಎಂದು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಳು ಹುಲಿಗಳ ಸಾವು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 2025ರ ಜೂನ್ 26ರಂದು ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸೇರಿ ಐದು ಹುಲಿಗಳು ವಿಷ ಸೇವನೆಯಿಂದ ಸಾವಿಗೀಡಾದವು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿ ಜನರ ಆಕ್ರೋಶಕ್ಕೂ ಕಾರಣವಾಗಿತ್ತು.

ಕಳೆದ ಮಂಗಳವಾರವೂ ಕಾವೇರಿ ವನ್ಯಜೀವಿಧಾಮದ ಹೊಳೆಮರದೊಟ್ಟಿಗಸ್ತಿನ ಕಿರಬನ ಕಲ್ಲು ಅರಣ್ಯ ಪ್ರದೇಶದಲ್ಲಿಯೂ ಎರಡು ಹುಲಿಮರಿಗಳ ಮೃತಪಟ್ಟಿವೆ. ಒಟ್ಟಾರೆ ಎರಡು ತಿಂಗಳ ಅವಧಿಯಲ್ಲಿ 7 ಹುಲಿ 2 ಚಿರತೆ ಮೃತಪಟ್ಟಿವೆ.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

4 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

5 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

5 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

6 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

6 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

6 hours ago