ಚಾಮರಾಜನಗರ

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ ಖುಷಿ ಕೊಟ್ಟಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 287ನೇ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ನಂತರ ಮಾತನಾಡಿದರು.

ಸಂತ ಸೇವಾಲಾಲ್ ಜಯಂತಿ ಮೂಲಕ ನೀವೆಲ್ಲರೂ ಸಹ ಸಂಘಟನೆಯಾಗುತ್ತಿದ್ದೂ ಇದರ ಮೂಲಕ ತಮ್ಮ ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಪಡೆದುಕೊಳ್ಳಲು ಜಾಗೃತವಾಗಿರುವುದು ಸಂತಸದ ವಿಚಾರ. ಸಂಘಟನೆಯ ಮೂಲಕ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವ ಮೂಲಕ ತಾವೆಲ್ಲರೂ ಸಹ ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ಕೊಟ್ಟಿದ್ದೀರಾ. ಮುಂದಿನ ದಿನಗಳಲ್ಲಿ ನಿಮ್ಮ ತಾಂಡಾಗಳಿಗೆ ಬೇಕಾಗುವಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನಾನು ಸದಾ ಮುಂದಿರುತ್ತೇನೆ. ಜೊತೆಗೆ ನೀವು ಕೊಟ್ಟಿರುವ ಮನವಿಯನ್ನು ಸಹ ಆದಷ್ಟು ಬೇಗ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಸಂತ ಸೇವಾಲಾಲ್ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿರುವುದರಿಂದ ತಾವು ದಯವಿಟ್ಟು ಎಷ್ಟೆ ಕಷ್ಟ ಬಂದರು ಸಹ ತಮ್ಮ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ನೀವು ಪಟ್ಟ ಕಷ್ಟ ಅವರು ಪಡಬಾರದು ಎಂಬ ಉದ್ದೇಶ ಇಟ್ಟುಕೊಂಡು ತಾವು ಏನು ಗುರಿ ಕಟ್ಟುಕೊಂಡಿದ್ದೀರಾ. ಅದಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಹಾಗೂ ಇನ್ನಿತರ ಸೌಲಭ್ಯ ಕಲ್ಪಿಸಲು ನಾನು ಸಹ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಈಗಾಗಲೇ ನಾನು ಕುಡಿಯುವ ನೀರಿನ ವಿಷಯಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಅನುದಾನ ಬೇಕಿದೆ. ಸುಮಾರು 491 ಕೋಟಿ ಅನುದಾನ ಬೇಕಿದೆ ಒಂದು ವೇಳೆ ಅಷ್ಟು ಅನುದಾನ ಬಜೆಟ್ ನಲ್ಲಿ ಬಿಡುಗಡೆಯಾದರೆ ನಮ್ಮ ಭಾಗಕ್ಕೆ ಹೆಚ್ಚಿನ ನೀರಾವರಿ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.

ಕೆಪಿಸಿಸಿ ಕಾನೂನು ವಿಭಾಗದ ಅನಂತ ನಾಯ್ಕ್ ಮಾತನಾಡಿ, ಬಂಜಾರ ಸಮುದಾಯಕ್ಕೆ ಸೇವಾಲಾಲ್ ಒಂದು ಕಣ್ಣಾದರೆ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇನ್ನೊಂದು ಕಣ್ಣು. ಬಾಬಾ ಸಾಹೇಬರು ಕೊಟ್ಟಿರುವ ಸಂವಿಧಾನ ಇರುವವರೆಗೂ ಸಹ ನಮ್ಮನ್ನ ಎಸ್ ಸಿ ಪಟ್ಟಿಯಿಂದ ಕೈ ಬಿಡಲು ಯಾರಿಂದಲೂ ಸಾಧ್ಯವಿಲ್ಲ. ನಮಗೆ ಮೊದಲು ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರು ಕೊಟ್ಟಿರುವ ಮೀಸಲಾತಿಯನ್ನು ಕಾಣದ ಕೈಗಳು ಕಿತ್ತು ಕೊಳ್ಳಲು ಮುಂದಾಗಿದ್ದು, ಅದನ್ನು ಅರಿತ ಸಿದ್ದರಾಮಯ್ಯ ಸರ್ಕಾರ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಈ ಹಿಂದೆ ಇದ್ದಂತೆ ಮೀಸಲಾತಿ ಮುಂದುವರಿಯಲಿದೆ ಎಂದು ತಿಳಿಸಿದ್ದು, ಅವರಿಗೆ ನಮ್ಮ ಬಂಜಾರ ಸಮುದಾಯದ ವತಿಯಿಂದ ಧನ್ಯವಾದಗಳು ಅರ್ಪಿಸುತ್ತೇವೆ. ಜೊತೆಗೆ ನಮ್ಮ ಭಾಷೆ ಇಡೀ ಜಗತ್ತಿನಲ್ಲಿ ಎಲ್ಲರೂ ಒಂದೇ ಭಾಷೆ ಮಾತಾಡುತ್ತಾರೆ. ನಮ್ಮ ಆಚಾರ, ವಿಚಾರ, ಸಂಸ್ಕೃತಿ ತುಂಬಾ ಮೆಚ್ಚುವಂತದ್ದಾಗಿದೆ. ಆದರೆ ನಮ್ಮ ಭಾಷೆಗೆ ಸಂವಿಧಾನದಲ್ಲಿ ಮಾನ್ಯತೆ ಸಿಕ್ಕಿಲ್ಲ ಮುಂದಿನ ದಿನಗಳಲ್ಲಿ ಮಾನ್ಯತೆ ಸಿಗುವಲ್ಲಿ ನಮ್ಮ ಶಾಸಕರು ಸದನದಲ್ಲಿ ದ್ವನಿ ಎತ್ತಬೇಕಿದೆ ಎಂದರು.

ಬಂಜಾರ ಸಂಘದ ಗೌರವಾಧ್ಯಕ್ಷ ಶಾಂತರಾಜು ಮಾತನಾಡಿ, ಲಂಬಾಣಿ ಸಮುದಾಯಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಶಾಸಕರು ಬಜೆಟ್ ಅಧಿವೇಶನದಲ್ಲಿ ನಮ್ಮ ಸಮುದಾಯದ ಪರ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ಹನೂರು ತಾಲೂಕು ವ್ಯಾಪ್ತಿಯಲ್ಲಿ 29 ತಾಂಡಗಳಿದ್ದು, ತಾಲೂಕು ಕೇಂದ್ರದಲ್ಲಿ ಸಮುದಾಯ ಭವನ ಇಲ್ಲದೆ ಇರುವುದರಿಂದ ಸಮಾಜದವರು ಸಭೆ ಸಮಾರಂಭಗಳನ್ನು ಮಾಡಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಎರಡು ಎಕರೆ ಸರ್ಕಾರಿ ನಿವೇಶನವನ್ನು ಕೊಡಿಸಬೇಕು. ಹಲವಾರು ವರ್ಷಗಳಿಂದ ತಾಂಡಾ ಗ್ರಾಮಗಳು ಕಂದಾಯ ಗ್ರಾಮವಾಗದಿರುವುದರಿಂದ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಅತಿ ಶೀಘ್ರದಲ್ಲಿ ನಮ್ಮ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ನಮ್ಮ ಸಮುದಾಯಕ್ಕೆ ಪ್ರತ್ಯೇಕವಾಗಿ ಸ್ಮಶಾನದ ವ್ಯವಸ್ಥೆ ಇಲ್ಲದೆ ಇರುವುದರಿಂದ ತೊಂದರೆ ಆಗುತ್ತದೆ. ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳದೆ ಅತಿ ಶೀಘ್ರದಲ್ಲಿಯೇ ಸ್ಮಶಾನಕ್ಕೆ ನಿವೇಶನ ಗುರುತಿಸಿ ಕೊಡಬೇಕು ಎಂದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನಾ ಪಟ್ಟಣದ ಆರ್‌ಎಂಸಿ ಮೈದಾನದಿಂದ ಹೊರಟ ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ಮಾಡುವ ಮೂಲಕ ಮುಖ್ಯ ರಸ್ತೆಯ ಮೂಲಕ ಹೊರಟು ನಾಡಪ್ರಭು ಕೆಂಪೇಗೌಡ ವೃತ್ತದ ಮೂಲಕ ಮಲೆಮಹದೇಶ್ವರ ಕ್ರೀಡಾಂಗಣಕ್ಕೆ ಆಗಮಿಸಿತು. ವಾದ್ಯ ಮೇಳದ ತಾಳಕ್ಕೆ ಬಂಜಾರ ಸಮುದಾಯದ ಯುವಕರು, ಮಹಿಳೆಯರು ಮಕ್ಕಳು ಕುಣಿದು ಕುಪ್ಪಳಿಸಿದರು.

ಜಗದ್ಗುರು ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಪರಮ ಪೂಜ್ಯ ಸೇವಾಲಾಲ್ ಸೈನಾ ಭಗತ್, ಮಾಜಿ ಶಾಸಕರುಗಳಾದ ಆರ್ ನರೇಂದ್ರ, ಜಿ ಎನ್ ನಂಜುಂಡಸ್ವಾಮಿ, ಸೇವಾಲಾಲ್ ಸಂಘದ ಗೌರವ ಅಧ್ಯಕ್ಷ ಶಾಂತರಾಜು, ಡಾ.ದತ್ತೇಶ್ ಕುಮಾರ್,ಸಮಾಜ ಸೇವಕ ನಿಶಾಂತ್, ಡಾ ವಿಜಯ್ ಜಾಧವ್, ಚಾಮುಲ್ ಅಧ್ಯಕ್ಷ ನಂಜುಂಡ ಸ್ವಾಮಿ, ನಿರ್ದೇಶಕರಾದ ಮಹದೇವ ಪ್ರಸಾದ್, ಶಾಹುಲ್ ಅಹಮದ್,ಅನಂತ್ ನಾಯ್ಕ್, ಮಹಿಳಾ ರಾಜ್ಯ ಅಧ್ಯಕ್ಷೆ ಶೈಲ ಬಾಯಿ, ಕರ್ನಾಟಕ ಪ್ರದೇಶ ರಾಜ್ಯ ಅಧ್ಯಕ್ಷ ಸಿದ್ಯಾ ನಾಯ್ಕ ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

9 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

11 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

18 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

24 mins ago