ಚಾಮರಾಜನಗರ: ಹಿರಿಯ ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮತ್ತೊಮ್ಮೆ ಸಂಸದರಾಗಬೇಕು ಎಂದಿದ್ದರು. ಇದಕ್ಕೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇನ್ನೂ ಬಿಜೆಪಿ ನಾಯಕರು ರಾಘವೇಂದ್ರ ಅವರ ಕೆಲಸವನ್ನು ಶಾಮನೂರು ಗುರುತಿಸಿ ಹೇಳಿಕೆ ನೀಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು.
ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಂಎಲ್‌ಸಿ ಎಚ್. ವಿಶ್ವನಾಥ್ ಅವರು, ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಶಾಸಕರಾಗಿ, ಮಗ ಮಂತ್ರಿಯಾಗಿ, ನೀನು ಕಾಂಗ್ರೆಸ್‍ನಲ್ಲಿದ್ದುಕೊಂಡು ಅಧಿಕಾರ ಅನುಭವಿಸಿ ಬೇರೆ ಪಾರ್ಟಿಗೆ ಕ್ಯಾನ್ವಾಸ್ ಮಾಡ್ತಿಯಲ್ಲ ಏನ್ ಹೇಳ್ಬೇಕು ನಿನಗೆ. ನೀನು ದೇಶವಾದಿನೋ? ಇಲ್ಲ, ಜಾತಿವಾದಿನೊ? ಅವರನ್ನ ಪಕ್ಷದಿಂದ ಈ ಕೂಡಲೇ ಹೊರಹಾಕಬೇಕು. ಅವರೆಲ್ಲ ನೆಂಟರು, ಅವರಿಗೆ ಪಾರ್ಟಿ ಸೋತ್ರು ನೆಂಟಸ್ತಿಕೆ ಸೋಲಬಾರದು ಎಂದು ಶಿವಶಂಕರಪ್ಪ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ನಿಗಮ ಮಂಡಳಿ ವಿಚಾರದಲ್ಲಿ ಶಾಸಕರ ಅಸಮಾಧಾನ ವಿಚಾರವಾಗಿ, ಎಂಎಲ್‍ಎಗಳಿಗೆ ಬೋಡ್ರ್ಸ್ & ಕಾರ್ಪೋರೇಷನ್ ಕೊಡ್ಬೇಡಿ ಎಂದು ವೀರೇಂದ್ರ ಪಾಟೀಲ್‍ರ ಕಾಲದಲ್ಲೇ ಹೇಳಿದ್ದೆ ಎಂದು ಪ್ರತಿಕ್ರಿಯೆ ನೀಡಿದರು.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…