ಚಾಮರಾಜನಗರ

ಹನೂರು: ಚಿರತೆ ದಾಳಿಗೆ ಮೇಕೆ ಬಲಿ

ಹನೂರು: ತಾಲ್ಲೂಕಿನ ಕೆ.ಗುಂಡಾಪುರದ ಪರಮೇಶ ಎಂಬುವರಿಗೆ ಸೇರಿದ ಮೇಕೆಯ ಮೇಲೆ ದಾಳಿ ಮಾಡಿರುವ ಚಿರತೆ ಮೇಕೆಯನ್ನು ಕೊಂದು ಹಾಕಿದೆ.

ಮೇಕೆ ಮೇಯಿಸಿ ಸಂಜೆ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಬುಧವಾರ ತಡರಾತ್ರಿ ಚಿರತೆ ದಾಳಿ ನಡೆಸಿದೆ. ಸಮೀಪದಲ್ಲೇ ಇದ್ದ ಸಾಕು ನಾಯಿಯನ್ನು ಹೊತ್ತೊಯ್ದಿದೆ. ಈ ಭಾಗದಲ್ಲಿ ಚಿರತೆಯ ಉಪಟಳ ಹೆಚ್ಚಾಗಿದ್ದು, ಕುರಿ, ಮೇಕೆಗಳನ್ನು ತಿಂದು ಹಾಕುತ್ತಿದೆ. ರೈತಾಪಿ ವರ್ಗ ಆತಂಕಗೊಂಡಿದ್ದು, ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

andolanait

Recent Posts

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

55 mins ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

59 mins ago

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

1 hour ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

2 hours ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

2 hours ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

3 hours ago