ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಮರಾಜನಗರ ಪಟ್ಟಣದ ಪಿ.ಡಬ್ಲು.ಡಿ ಶಾಲೆ ಮತಗಟ್ಟೆ ಸಂಖ್ಯೆ 80 ರಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮತ ಚಲಾಯಿಸಿದರು.
ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷವಾಕ್ಯವುಳ್ಳ ಸೀರೆಯನ್ನುಟ್ಟುಕೊಂಡು ಮತಕಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ಆ ಮೂಲಕ ಮತದಾನದ ಮಹತ್ವವನ್ನು ವಿಭಿನ್ನವಾಗಿ ಸಾರಿದ್ದಾರೆ.
ಈ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂದು ಜಾಗೃತಿಗೊಳಿಸುವ ಉದ್ದೇಶದಿಂದ ಸೀರೆಯಲ್ಲಿ ಮತದಾನ ಜಾಗೃತಿ ಘೋಷ ವಾಕ್ಯಗಳನ್ನು ಮುದ್ರಿಸಿ ಹಂಚಲಾಗಿದೆ ಎಂದು ಅವರು ತಿಳಿಸಿದ್ದರು.
ಚಾಮರಾಜನಗರ ತಾಲೂಕಿನ ಸಣ್ಣೇಗಾಲ ಗ್ರಾಮದಲ್ಲಿ ಮತದಾನ ಮಾಡಿದರು. ಇವರಿಗೆ ಜೊತೆಯಾಗಿ ಉಪಕಾರ್ಯದರ್ಶಿ ಲಕ್ಷ್ಮೀ ಹಾಗೂ ಆಹಾರ ಇಲಾಖೆ ಉಪನಿರ್ದೇಶಕಿ ಸವಿತಾ ಅವರು ರೇಷ್ಮೆ ಸೀರೆ ಧರಿಸಿದ್ದರು. ಅದರಲ್ಲಿ ಚುನಾವಣಾ ಪರ್ವ-ದೇಶದ ಗರ್ವ ಎಂದು ಬರೆಯಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…