ಚಾಮರಾಜನಗರ

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 119 ನೇ ವರ್ಷದ ಜಯಂತಿ ಮಹೋತ್ಸವವನ್ನು ವೀರಶೈವ ಮಹಾಸಭೆ ಯುವಘಟಕ, ಸಮುದಾಯದ ಹಿರಿಯರು ಕಿರಿಯರ ಸಹಯೋಗದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ, ಆಶ್ರಯ, ದಾಸೋಹ ನೀಡುವ ಮೂಲಕ ಇಡೀ ಕರ್ನಾಟಕದ ಮನೆ ಮನೆಯಲ್ಲೂ ದೇವರಂತೆ ನೆಲೆಸಿರುವ ಶಿವಕುಮಾರ ಸ್ವಾಮೀಜಿಯ ಜಯಂತಿ ಆಚರಣೆಯ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಅವರು ಸಾಮಜಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸುವಂತೆ ಮುಖಂಡರು ಯುವ ಸಮುದಾಯಕ್ಕೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಹೆಚ್ ಎಸ್ ನಂಜುಂಡಪ್ರಸಾದ್, ಹಂಗಳ ನಂಜಪ್ಪ, ಕಮರಹಳ್ಳಿ ರವಿ, ಸುರೇಶ್ ಶಿವಪುರ, ಯುವ ಘಟಕ ಅಧ್ಯಕ್ಷ ಗುರುಪ್ರಸಾದ್, ವೀರಶೈವ ಮಹಾಸಭೆ ನಿರ್ದೇಶಕರುಗಳು, ಸಮುದಾಯದ ಯುವಕರು ಮತ್ತಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

5 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

9 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

15 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

16 hours ago