ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.
ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ ಗ್ರಾಮದವರು ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ.
ಇದರ ಜೊತೆಗೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ರಸ್ತೆ ಮೂಲಕ ಕಾಲ್ನಡಿಗೆಯಲ್ಲಿ ಬರುತ್ತಿದ್ದಾರೆ.
ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಸಾರ್ವಜನಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತ ಸಾರ್ವಜನಿಕರು ಹಗಲು-ರಾತ್ರಿ, ಚಳಿ-ಬಿಸಿಲೆನ್ನದೇ ಬೆಟ್ಟಕ್ಕೆ ಬರುತ್ತಿದ್ದಾರೆ.





