ಚಾಮರಾಜನಗರ

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ ಕಾಲ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಐದುದಿನ ಏನಿರುತ್ತೆ?
ಫೆಬ್ರವರಿ 14ರಂದು ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಶ್ರೀ ಸಾಲೂರು ಬೃಹನ್ಮಠಕ್ಕೆ ಉತ್ಸವ ಹೊರಡುವುದು. ಫೆ.15ರಂದು ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ವಿಶೇಷ ಸೇವೆ ಉತ್ಸವಾದಿಗಳು ಹಾಗೂ ಜಾಗರಣೆ ಉತ್ಸವ, ಫೆ.16ರಂದು ಶ್ರೀ ಸ್ವಾಮಿಗೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು, ಫೆ.17ರಂದು ಮಹಾಶಿವರಾತ್ರಿ ಅಮಾವಾಸ್ಯೆ ವಿಶೇಷ ಸೇವೆ ಮತ್ತು ಉತ್ತವಾದಿಗಳು, ಫೆ18ರಂದು ಮಹಾರಥೋತ್ಸವ, ಬೆಳಿಗ್ಗೆ 10.05ರಿಂದ 11 ಗಂಟೆಯವರೆಗೆ ರಥೋತ್ಸವ ನಡೆಯಲಿದೆ. ನಂತರ ಗುರುಬ್ರಹೋತ್ಸವ ಮತ್ತು ಅನ್ನ ಬ್ರಹೋತ್ಸವ, ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ ನಡೆಯಲಿದೆ.

ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ ಸಂಜೆ 5:30ರ ವರೆಗೆ ಸಂಜೆ 8 ಗಂಟೆಯಿಂದ ಬೀಗ ಮುದ್ರೆ ಆಗುವವರೆಗೂ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳಬೆಟ್ಟದಿಂದ ಮ.ಬೆಟ್ಟದವರೆಗಿನ ಮಾರ್ಗ ಮಧ್ಯದಲ್ಲಿ 15 ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಬೆಟ್ಟದ ಪ್ರಮುಖ ಸ್ಥಳಗಳಲ್ಲಿ ಟ್ಯಾಂಕ್‌ಗಳ ಮೂಲಕ ಶುದ್ಧ ನೀರಿನ ವ್ಯವಸ್ಥೆ ದಾಸೋಹ ಕಲ್ಪಿಸಲಾಗಿದೆ. ದಾಸೋಹ ಭವನದ ಸಮೀಪವೇ ಜಾತ್ರಾ ಮಹೋತ್ಸವ ಸಂಬಂಧ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಬಾರಿಗೆ 2 ಸಾವಿರ ಜನರು ಪ್ರಸಾದ ಸ್ವೀಕರಿಸಬಹುದಾಗಿದೆ.

ಈಗಾಗಲೇ ಸುಮಾರು 3 ಲಕ್ಷ ಲಾಡುಗಳನ್ನು ತಯಾರು ಮಾಡಿಕೊಳ್ಳಲಾಗುತ್ತಿದೆ. ರಾಜಗೋಪುರದ ಎಡ ಭಾಗ ಹಾಗೂ ಬಲಭಾಗದಲ್ಲಿ ನೆರಳಿನ ವ್ಯವಸ್ಥೆ, ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಸ್ಥಳದ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದೆ. ಈಗಾಗಲೇ ಗುರುವಾರ 68 ಸಾವಿರ ಲಾಡು ಮಾರಾಟವಾಗಿದೆ ಎಂದು ತಿಳಿದುಬಂದಿದೆ.

ತಾಳಬೆಟ್ಟದಲ್ಲಿ 50 ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನಸಂದಣಿ ಹೆಚ್ಚಿರುವ ಕಡೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೌರಕಾರ್ಮಿಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಪಾದಯಾತ್ರೆಯ ಮೂಲಕ ಮ.ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ, 60 ವರ್ಷ ಮೇಲ್ಪಟ್ಟವರಿಗೆ ರಾಜಗೋಪುರದ ಪ್ರವೇಶ ದ್ವಾರದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅತಿಥಿ ಗಣ್ಯರಿಗೆ, ಜನಪ್ರತಿನಿಧಿಗಳಿಂದ ಶಿಫಾರಸು ಪತ್ರ ಪಡೆದು ಬರುವವರಿಗೆ ದೇವಸ್ಥಾನದ ಕಾರ್ಯಾಲಯದಲ್ಲಿ ವಿಶೇಷ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಪಡೆದು ಗೇಟ್ ನಂ.4ರಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೇ ಪ್ರವೇಶ ದ್ವಾರದಲ್ಲಿಯೇ ಅಂಗವಿಕಲರು ಕೂಡ ತೆರಳಿ ದರ್ಶನ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳಿಗೆ ನಿರ್ಬಂಧ
ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಸಂಬಂಧ ಟ್ರಾಫಿಕ್ ಜಾಮ್ ತಡೆಗಟ್ಟಲು ಫೆಬ್ರವರಿ 13ರ ಬೆಳಿಗ್ಗೆ 6 ಗಂಟೆಯಿಂದ ಫೆ18 ರ ಸಂಜೆ 6 ಗಂಟೆಯವರೆಗೆ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವುದನ್ನು ನಿರ್ಬಂಧಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ ಮುಖಾಂತರ ಮ.ಬೆಟ್ಟಕ್ಕೆ ತೆರಳಬಹುದು.

ಅಗತ್ಯ ಬಂದೋ ಬಸ್ತ್‌
ಮುನ್ನೆಚ್ಚರಿಕೆ ಕ್ರಮವಾಗಿ ಒಬ್ಬರು ಎಸ್ಪಿ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಒಂದು ಡಿವೈಎಸ್ಪಿ, 5 ಇನ್‌ಸ್ಪೆಕ್ಟರ್, 12 ಎಸ್‌ಐ35, ಎಎಸ್ಐ 60, ಮಹಿಳಾಪೇಟೆ ಪೇದೆಗಳು 350 ಗೃಹರಕ್ಷಕ ಸಿಬ್ಬಂದಿಗಳು 350, ಕೆ ಎಸ್ ಆರ್ ಪಿ ಮೂರು, ಡಿಆರ್ ವಾಹನ ಒಂದು ಒಳಗೊಂಡಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

600 ಸಾರಿಗೆ ಬಸ್
ಜಾತ್ರಾ ಮಹೋತ್ಸವಕ್ಕೆ ಕೆಎಸ್ ಆರ್‌ಟಿಸಿ ವತಿಯಿಂದ ಚಾಮರಾಜನಗರ ಮೈಸೂರು ನಗರ ಮೈಸೂರು ಗ್ರಾಮಾಂತರ ಮಂಡ್ಯ ಬೆಂಗಳೂರು ರಾಮನಗರ ಘಟಕಗಳಿಂದ 600 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಕೆಟ್ಟು ನಿಂತರೆ ದುರಸ್ತಿಪಡಿಸಲು 20 ಮಂದಿ ತಾಂತ್ರಿಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಿ ಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ನಾಗರಾಜು ತಿಳಿಸಿದ್ದಾರೆ.

ವರದಿ : ಮಹಾದೇಶ್ ಎಂ.ಗೌಡ

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago