Mysore
29
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ ಯಶಸ್ವಿಯಾಗಿ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಸುಮಾರು 8 ರಿಂದ 9 ಲಕ್ಷಕ್ಕೆ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದ್ದಾರೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಶಾಸಕ ಎಂ.ಆರ್.ಮಂಜುನಾಥ್, ಜಿಲ್ಲಾಡಳಿತ ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನಸ್ವಾಮಿ, ಬೇಡಗಂಪಣ ಅರ್ಚಕ ವೃಂದದವರ ಮಾರ್ಗದರ್ಶನದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿದೆ ಎಂದರು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಧಿಕಾರದ ಪ್ರತಿಯೊಬ್ಬ ನೌಕರರು ಹಗಲಿರುಳು ಶ್ರಮಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ. ಅವರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

ಈ ಬಾರಿ ಸುಮಾರು ಎಂಟು ಲಕ್ಷಕ್ಕೂ ಹೆಚ್ಚು ಮಾದಪ್ಪ ಭಕ್ತರು ವಿಶೇಷ ದಾಸೋಹ ಹಾಗೂ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಿದ್ದಾರೆ. ಮಹದೇಶ್ವರಸ್ವಾಮಿ ಎಲ್ಲರಿಗೂ ಒಳಿತು ಮಾಡಲಿ ಎಂದು ಶುಭ ಕೋರಿದರು.

ಈ ವೇಳೆ ಲೆಕ್ಕಾಧೀಕ್ಷಕರಾದ ಗುರುಮಲ್ಲಯ್ಯ, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹದೇವಸ್ವಾಮಿ, ನಾಗರಾಜು, ಜನಾರ್ಧನ್, ಪಾರುಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ರಾಜಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!