ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ ಹಾಗೂ ವಿವಿಧ ಉತ್ಸವಗಳು ಜರುಗಿದವು.

ದೇಗುಲದಲ್ಲಿ ಶನಿವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಆರಂಭಗೊಂಡಿತು. ಶನಿವಾರ ರಾತ್ರಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ಸತ್ತಿಗೆ, ಸೂರಿಪಾನಿ, ಛತ್ರಿ, ಚಾಮರ ಹಾಗೂ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆಯ ಮೂಲಕ ಸಾಲೂರು ಮಠಕ್ಕೆ ಕೊಂಡೊಯ್ದು ಪೂಜೆ ನೆರವೇರಿಸಲಾಯಿತು.

ಸಾಲೂರು ಬೃಹನೃಠದಲ್ಲಿ ಉತ್ಸವ ಮೂರ್ತಿಗೆ ಅಗ್ರ ಪೂಜೆಯನ್ನು ನೆರವೇರಿಸಿ ಮಾದಪ್ಪನ ಸನ್ನಿಧಿಗೆ ಪೊಡಮಟ್ಟು ಕಳುಹಿಸಿಕೊಡಲಾಯಿತು. ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ಪೂಜೆ ಸಲ್ಲಿಸಲಾಯಿತು. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಸಂಜೆ 6.30ರಿಂದ ರಾತ್ರಿ 8.30 ಗಂಟೆಯವರೆಗೆ ಸ್ವಾಮಿಗೆ ಬೇಡಗಂಪಣ ಸಮುದಾಯದ ಸರದಿ ಅರ್ಚಕರಿಂದ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಲಾಯಿತು.

ದೀಪ, ಧೂಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಶಿವರಾತ್ರಿ ಅಂಗವಾಗಿ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಹಣ್ಣು ಹಾಗೂ ಪುಷ್ಪಗಳಿಂದ ವಿಶೇಷವಾಗಿ ಸಿಂಗಾರ ಮಾಡಲಾಗಿತ್ತು.

ಮಹಾ ಶಿವರಾತ್ರಿ ಜಾತ್ರೆ ಅಂಗವಾಗಿ ಒಂದು ವಾರದಿಂದ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಕಾಲ್ನಡಿಗೆ ಮೂಲಕ ಆಗಮಿಸಿ ಮ.ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದರು. ಭಾನುವಾರ ರಾತ್ರಿ ಜರುಗಿದ ಜಾಗರಣೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಮಧ್ಯಾಹ್ನದ ನಂತರ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿತ್ತು. ರಾತ್ರಿ ದೇಗುಲದ ಆವರಣ ಹಾಗೂ ರಂಗ ಮಂದಿರದಲ್ಲಿ ನೆರೆದಿದ್ದ ಮಂದಿ ಶಿವನ ಧ್ಯಾನ ಮಾಡಿದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಚಿನ್ನದ ಕಿರೀಟ ಧಾರಣೆ: ಮಹಾಶಿವರಾತ್ರಿ ಜಾತ್ರಾಮಹೋತ್ಸವ ಪ್ರಯುಕ್ತ ಭಾನುವಾರ ಮಲೆ ಮಹದೇಶ್ವರ ಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಚಿನ್ನದ ರಥೋತ್ಸವ: ಬುಧವಾರ ಸಂಜೆ 7 ಗಂಟೆಗೆ ನಡೆದ ಚಿನ್ನದ ತೇರಿನ ಉತ್ಸವವು ಲಕ್ಷಾಂತರ ಜನರ ಸಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ತೇರನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಹೊತ್ತ ಜನರು ದಂಡಿನ ಕೋಲನ್ನು ಹೊತ್ತು ಸಾಗಿದರು. ಇದಲ್ಲದೆ ವಿವಿಧ ಸೇವೆಗಳನ್ನು ಸಮರ್ಪಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದುವರೆಗೆ ಸುಮಾರು 3 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಫೆಬ್ರವರಿ 18ರಂದು ನಡೆಯಲಿರುವ ಮಹಾರಥೋತ್ಸವ, ಕೊಂಡೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

3 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

4 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

6 hours ago